ಮನೆಯ ಮುಂದೆ ಮಲಗಿದ್ದ ವ್ಯಕ್ತಿಯೋರ್ವನ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದ್ದು, ಪತಿಯ ಕೊಲೆಗೆ ಪತ್ನಿಯೇ ಸುಪಾರಿ ಕೊಟ್ಟಿರುವುದಾಗಿ ತಿಳಿದುಬಂದಿದೆ.
ಸ್ವಗೃಹದ ಮುಂಬಾಗದಲ್ಲಿ ಮಲಗಿದ್ದ ವ್ಯಕ್ತಿಯನ್ನು ಹರಿತವಾದ ಆಯುದದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದ್ದು, ಕೊಲೆಯಾದ ವ್ಯಕ್ತಿ ನಿಂಗಪ್ಪನ ಪತ್ನಿ ನಿಲ್ಲಮ್ಮ ಹಾಗೂ ಗ್ರಾಮದ ಮಹೇಶ ಗೂಳನ್ನರ್ ಹಾಗೂ ಆತನ ಗೆಳೆಯ ಸೇರಿಕೊಂಡು ಪಕ್ಕದ ಗ್ರಾಮದ ಯಲ್ಲಪ್ಪನಿಗೆ ಸುಪಾರಿ ಕೊಟ್ಟು ಕೊಲೆ ಮಾಡಲು ಹೇಳಿದ್ದಳು ಎನ್ನಲಾಗಿದೆ.
ಈ ಕುರಿತು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ನೇಸರಗಿ ಸಿಪಿಐ ನೇತೃತ್ವದಲ್ಲಿ ತಂಡ ರಚನೆ ಮಾಡಿ ತನಿಖೆ ನಡೆಸಲಾಗಿ, ಪ್ರಕರಣದ 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿರಿ! ಧಾರವಾಡ | ಹೆಣ್ಣು ಮಕ್ಕಳನ್ನು ಚುಡಾಯಿಸಿದರೆ ಗಡಿಪಾರು: ಪೋಲಿಸ್ ಆಯುಕ್ತ ಎನ್.ಶಶಿಕುಮಾರ್ ಎಚ್ಚರಿಕೆ
ಈ ಬಗ್ಗೆ ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.