ಹಾಸನ | 10 ದಿನಗಳ ಕಾಲ ಉದ್ಯಮಶೀಲತಾಭಿವೃದ್ಧಿ ತರಬೇತಿ; ನೋಂದಣಿಗೆ ನ.23 ಕೊನೆಯ ದಿನ

Date:

Advertisements

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಯ ಇಲಾಖೆ, ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಹಾಗೂ ಹಾಸನ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ನವೆಂಬರ್‌ 25ರಿಂದ 10 ದಿನಗಳ ಕಾಲ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಲಿದೆ ಜಿಲ್ಲಾ ಕೈಗಾರಿಕಾ ಕೇಂದ್ರದ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಹಾಸನ ಜಿಲ್ಲಾ ಕೈಗಾರಿಕಾ ಕೇಂದ್ರದ ಸಿಡಾಕ್ ಜಂಟಿ ನಿರ್ದೇಶಕರು ಪ್ರಿಕೆ ಪ್ರಕಟಣೆ ಹೊರಡಿಸಿದ್ದು, “ಸರ್ಕಾರದ ವಿವಿಧ‌ ಇಲಾಖೆಗಳಲ್ಲಿ ಸ್ವಯಂ ಉದ್ಯೋಗಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮತ್ತು ಕೈಗಾರಿಕಾ ಹಾಗೂ ಸೇವಾ ಚಟುವಟಿಕೆ ಪ್ರಾರಂಭಿಸಲು ಪಿಎಂಇಜಿಪಿ ಯೋಜನೆಯಡಿ ಸಾಲ ಬಯಸುವ ಪರಿಶಿಷ್ಟ ಜಾತಿಯ ಸ್ವಉದ್ಯೋಗಾಂಕಾಕ್ಷಿಗಳಿಗೆ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿದೆ” ಎಂದು ಹೇಳಿದ್ದಾರೆ.

“ಅರ್ಹ ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯುಳ್ಳ 18-50 ವಯೋಮಾನದವರಾಗಿರಬೇಕು. ಹೆಸರು ನೋಂದಾವಣೆಗೆ ನವೆಂಬರ್‌ 23ರಂದು ಕೊನೆಯ ದಿನವಾಗಿರುತ್ತದೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ವಿಶ್ವ ಶೌಚಾಲಯ ದಿನಾಚರಣೆ ʼನಮ್ಮ ಶೌಚಾಲಯ-ನಮ್ಮ ಗೌರವʼ ಅಭಿಯಾನ

ತರಬೇತಿಯನ್ನು ಪಡೆಯಲು ಇಚ್ಛಿಸುವವರು ತಮ್ಮ ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಆಧಾರ್‌ ಕಾರ್ಡ್ ಜೆರಾಕ್ಸ್, ಜಾತಿ ಪ್ರಮಾಣ ಪತ್ರ ಜೆರಾಕ್ಸ್ ಪ್ರತಿಯೊಂದಿಗೆ ಸಿಡಾಕ್ ಹಾಸನ ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ ಸಲ್ಲಿಸಬೇಕಾಗಿ ವಿನಂತಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೋಹನ್ ಹೆಚ್ ಪಿ ಮೊಬೈಲ್ ನಂ. 9743128159 ಹಾಗೂ ಇಮೇಲ್ cedokhassan@gmail.com ವಿಳಾಸಕ್ಕೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಜಿಲ್ಲಾ ಕೈಗಾರಿಕಾ ಕೇಂದ್ರದ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X