ರಾಯಚೂರು | ಪಿಡಿಒ ಪರೀಕ್ಷೆ ಅಕ್ರಮ ಆರೋಪ : ಸಿಐಡಿ ತನಿಖೆಯಾಗಲಿ : ರಜಾಕ್ ಉಸ್ತಾದ್

Date:

Advertisements

ರಾಯಚೂರು ಜಿಲ್ಲೆಯ ಸಿಂಧನೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಈಚೆಗೆ ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಗಲಾಟೆ ಸಿಐಡಿ ತನಿಖೆಗೆ ವಹಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷ ಡಾ.ರಜಾಕ್ ಉಸ್ತಾದ್ ಮನವಿ ಮಾಡಿದರು.

ಗುರುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ʼಕರ್ನಾಟಕ ಲೋಕಸೇವಾ ಆಯೋಗದಿಂದ ಪಿಡಿಒ ಹುದ್ದೆಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ 15 ನಿಮಿಷ ತಡವಾಗಿ ನೀಡಿದ್ದಲ್ಲದೇ, ಆಗಲೇ ಲಕೋಟೆ ತೆಗೆಯಲಾಗಿತ್ತು. ಇದನ್ನು ಗಮನಿಸಿ ಪರೀಕ್ಷಾರ್ಥಿಗಳು ಪ್ರಶ್ನಿಸಿದ್ದಾರೆ. ನಿಯಮಾನುಸಾರ ನಿಗದಿತ ಸಮಯಕ್ಕೆ ವಿದ್ಯಾರ್ಥಿಗಳ ಸಮ್ಮುಖದಲ್ಲೇ ಪ್ರಶ್ನೆ ಪತ್ರಿಕೆ ಲಕೋಟೆ ತೆರೆಯಬೇಕು.ಅಲ್ಲದೇ, ಇಬ್ಬರು ಪರೀಕ್ಷಾರ್ಥಿಗಳ ಸಹಿ ಕೂಡ ಪಡೆಯಬೇಕು. ಅಲ್ಲಿನ ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಯಾವುದೇ ನಿಯಮ ಪಾಲಿಸದೆ ಕರ್ತವ್ಯಲೋಪ ಎಸಗಿದ್ದಾರೆʼ ಎಂದು ಆರೋಪಿಸಿದರು.

ʼಕರ್ತವ್ಯಲೋಪ ಪ್ರಶ್ನಿಸಿದ ಪ್ರತಿಭಟನೆ ನಡೆಸಿದ ಕಾರಣಕ್ಕೆ 12 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ. ಇದರಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವುದು ತಪ್ಪು ಎಂದಾದರೆ, ನಿಯಮದ ಪ್ರಕಾರ ಪರೀಕ್ಷೆ ನಡೆಸದ ಅಧಿಕಾರಿಗಳದ್ದು ಕೂಡ ಅಷ್ಟೇ ತಪ್ಪು. ಹಾಗಾಗಿ ಪರೀಕ್ಷಾ ಕೇಂದ್ರದ ಮುಖ್ಯಸ್ಥ ಬಸವರಾಜ ಸೇರಿ ಇತರೆ ಸಿಬ್ಬಂದಿ ವಿರುದ್ಧವೂ ಪ್ರಕರಣ ದಾಖಲಿಸಬೇಕುʼ ಎಂದು ಒತ್ತಾಯಿಸಿದರು.

Advertisements

ʼಪರೀಕ್ಷಾ ಕೊಠಡಿಗಳಲ್ಲಿ 800 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿದ್ದರು. ಪ್ರತಿ ಕೋಣೆಯಲ್ಲಿ 24 ವಿದ್ಯಾರ್ಥಿಗಳಿದ್ದು, ಕೇವಲ 12 ವಿದ್ಯಾರ್ಥಿಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ನೀಡಲಾಗಿದೆ. ಈ ರೀತಿ ಎಲ್ಲ ಕೋಣೆಗಳಲ್ಲೂ ಸಮಸ್ಯೆ ಆಗಿದೆ. ಆದರೆ, ಇಷ್ಟೆಲ್ಲ ಆಗಿದ್ದರೂ ಸ್ಥಳೀಯ ಅಧಿಕಾರಿಗಳೇ ತನಿಖೆ ನಡೆಸಿ ವಿದ್ಯಾರ್ಥಿಗಳನ್ನು ಮಾತ್ರ ಗುರಿ ಮಾಡುತ್ತಿರುವುದು ಎಷ್ಟು ಸರಿʼ ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? BIG BREAKING | ತುಮಕೂರು ದಲಿತ ಮಹಿಳೆಯ ಹತ್ಯೆ ಪ್ರಕರಣ; 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ʼಈ ಕೇಂದ್ರದಲ್ಲಿ ಇಂಥ ಪರೀಕ್ಷೆಗಳು ನಡೆದಿರುವುದು ಇದೇ ಮೊದಲಲ್ಲ. ಅಲ್ಲದೇ, ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗೂ ತರಬೇತಿ ನೀಡಿರುತ್ತಾರೆ. ಇದರಲ್ಲಿ ಕೇವಲ ವಿದ್ಯಾರ್ಥಿಗಳನ್ನು ತಪ್ಪಿತಸ್ಥರನ್ನಾಗಿ ಮಾಡದೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನು, ಸಿಬ್ಬಂದಿಯನ್ನು ತಪ್ಪಿತಸ್ಥರನ್ನಾಗಿ ಮಾಡಬೇಕು ಹಾಗೂ ಪ್ರಕರಣವನ್ನು ಸಿಒಡಿ ತನಿಖೆಗೆ ವಹಿಸಬೇಕುʼ ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಹ್ಮದ್ ಉಸ್ಮಾನ್ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X