ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಹಮಾಸ್ ನಾಯಕ ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಗುರುವಾರ ಬಂಧನ ವಾರೆಂಟ್ ಹೊರಡಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಐಸಿಸಿ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರು ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ಹಮಾಸ್ ದಾಳಿ ಮತ್ತು ಗಾಜಾದಲ್ಲಿ ಟೆಲ್ ಅವಿವ್‌ನ ಮಿಲಿಟರಿ ಕಾರ್ಯಾಚರಣೆಗೆ ಸಂಬಂಧಿಸಿದ ಅಪರಾಧಗಳಿಗೆ ಬಂಧನ ವಾರೆಂಟ್‌ಗಳನ್ನು ಕೋರುತ್ತಿರುವುದಾಗಿ ಮೇ 20ರಂದು ಘೋಷಿಸಿದ್ದರು.
ಇದನ್ನು ಓದಿದ್ದೀರಾ? ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಒಬ್ಬ ರಾಕ್ಷಸ, ಕ್ರೂರಿ: ಅಸಾದುದ್ದೀನ್ ಓವೈಸಿ ಕಿಡಿ
“ಇಬ್ಬರೂ ಕೂಡಾ ಆಹಾರ, ನೀರು ಮತ್ತು ಔಷಧಿ, ವೈದ್ಯಕೀಯ ಸರಬರಾಜುಗಳು, ಇಂಧನ ಮತ್ತು ವಿದ್ಯುತ್ ಸೇರಿದಂತೆ ಗಾಜಾದಲ್ಲಿನ ನಾಗರಿಕರ ಉಳಿವಿಗೆ ಅನಿವಾರ್ಯವಾದ ವಸ್ತುಗಳನ್ನು ಉದ್ದೇಶಪೂರ್ವಕವಾಗಿ ವಂಚಿಸಿದ್ದಾರೆ ಎಂದು ನಂಬಲು ಸಮಂಜಸವಾದ ಆಧಾರಗಳಿವೆ ಎಂದು ಪೀಠ ಪರಿಗಣಿಸಿದೆ. ಮೂವರು ನ್ಯಾಯಾಧೀಶರ ಪೀಠ ಸರ್ವಾನುಮತದಿಂದ ಈ ನಿರ್ಧಾರವನ್ನು ಮಾಡಿದೆ.
ನ್ಯಾಯಾಲಯದ ಅಧಿಕಾರ ವ್ಯಾಪ್ತಿಯನ್ನು ಇಸ್ರೇಲ್ ಒಪ್ಪಿಕೊಳ್ಳುವ ಅಗತ್ಯವಿಲ್ಲ ಎಂದು ಐಸಿಸಿ ಹೇಳಿದೆ. ಇಸ್ರೇಲ್ ಐಸಿಸಿಯ ಅಧಿಕಾರ ವ್ಯಾಪ್ತಿಯನ್ನು ತಿರಸ್ಕರಿಸಿದೆ ಮತ್ತು ಗಾಜಾದಲ್ಲಿ ಯುದ್ಧ ಅಪರಾಧಗಳನ್ನು ನಿರಾಕರಿಸಿದೆ.
