ಅಪ್ರಾಪ್ತ ವಿಕಲ ಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಅಂಗವಿಕಲರ ರಕ್ಷಣಾ ತಾಲೂಕು ಸಮಿತಿ ಶಹಾಪುರ ವತಿಯಿಂದ ಪೊಲೀಸರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮನವಿ ಪತ್ರ ಸಲ್ಲಿಸಿ ರಾಜ್ಯಾಧ್ಯಕ್ಷ ಸುಭಾಸ್ ಹೋತಪೇಟ ಮಾತನಾಡಿ, ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಕೆ ಗ್ರಾಮದ ಅಪ್ರಾಪ್ತ ಅಂಗವಿಕಲ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಇಡೀ ಮನುಕುಲವೆ ತಲೆ ತಗ್ಗಿಸುವಂತಾಗಿದೆ ಎಂದರು.
ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ಅಂಗವಿಕಲ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿ ಸಂತೋಷ್ ಎಂದು ತಿಳಿದು ಬಂದಿದ್ದು, ಈತನನ್ನು ಪೋಲಿಸರು ವಶಕ್ಕೆ ಪಡೆದು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಇಂತಹ ಕಾಮುಕರಿಗೆ ಗಲ್ಲು ಶಿಕ್ಷೆಯೇ ಸರಿಯಾದ ಶಿಕ್ಷೆ. ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.
ಇದನ್ನು ಓದಿದ್ದೀರಾ? ರಾಯಚೂರು | ಮಹಾರಾಷ್ಟ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲು ಇವಿಎಂ ದುರ್ಬಳಕೆ: ವಸಂತ ಕುಮಾರ್
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಯಾದಗಿರಿ ಜಿಲ್ಲಾಧ್ಯಕ್ಷ ಶಿವಪುತ್ರ ಜವಳಿ, ಸಂಗಮೇಶ್ ಕುಂಬಾರ್, ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಸರ್ವಜ್ಞ ಇನ್ನಿತರ ಸಂಘಟನೆಯ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.