ಬಂಟ್ವಾಳ | ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ದೇರಳಕಟ್ಟೆಯಲ್ಲಿರುವ ಕಣಚೂರು ಮ್ಯಾನೇಜ್‌ಮೆಂಟ್ ಆ್ಯಂಡ್ ಸೈನ್ಸ್ ಕಾಲೇಜಿನಲ್ಲಿ ‘ಶೋಧ: ಹಂಟಿಂಗ್ ಫಾರ್ ಟ್ಯಾಲೆಂಟ್ಸ್ 2024’ ಅಂತರ ಕಾಲೇಜು ಮಟ್ಟದ ಸ್ಪರ್ಧೆಯನ್ನು ಗುರುವಾರ ಆಯೋಜಿಸಲಾಗಿತ್ತು.

ಅಂತರ ಕಾಲೇಜು ಮಟ್ಟದ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ತಮ್ಮ ಅನನ್ಯ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪ್ರದರ್ಶಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದಿದ್ದಾರೆ‌.

ಕ್ವಿಝ್ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಖದೀಜಾ ಮಾಹಿರ ಮತ್ತು ರಿಹಾ ಹವ್ವಾ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Advertisements
IMG 20241121 WA1381

ಅದೇ ರೀತಿ , ಮ್ಯಾಡ್ ಆಡ್ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿಯರಾದ ಫಾತಿಮತ್ ಸಾರ ಶೈಭಾ ಮತ್ತು ಆಯಿಷತುಲ್ ಅಸೀಬಾ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ನೆಬಿಸತ್ ಫಾತಿಮಾ, ಶಮಾ, ಮತ್ತು ಶೌರತ್ ಭಾನು ತಮ್ಮ ಸೃಜನಾತ್ಮಕತೆ ಮತ್ತು ಹಾಸ್ಯಾತ್ಮಕ ಪ್ರಸ್ತುತಿಯಿಂದ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಕಾಲೇಜಿಗೆ ಕೀರ್ತಿ ತಂದುಕೊಟ್ಟದ್ದಕ್ಕಾಗಿ ಅನುಗ್ರಹ ಮಹಿಳಾ ಕಾಲೇಜಿನ ಉಪನ್ಯಾಸ ವೃಂದ, ಅನುಗ್ರಹ ಕಾಲೇಜು ಟ್ರಸ್ಟ್ ಅಭಿನಂದನೆ ಸಲ್ಲಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X