ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರವನ್ನು ಶೌಚಾಲಯಗಳ ಬಳಿಯ ಕಸದಲ್ಲಿ ಬಿಸಾಡಿರುವುದನ್ನು ಖಂಡಿಸಿ ಮಾದಿಗ ದಂಡೋರ ಹಾಗೂ ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಗುರುವಾರ ಸ್ಥಳದಲ್ಲೇ ಕುಳಿತು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಚಿಂತಾಮಣಿ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದ ಶೌಚಾಲಯದ ಸಮೀಪವಿರುವ ಕಸದ ಗುಂಡಿಯಲ್ಲಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರವನ್ನು ಎಸೆದು ಅವಮಾನ ಮಾಡಲಾಗಿದೆ. ಈ ಕೂಡಲೇ ತಪ್ಪಿತಸ್ಥರನ್ನು ಅಮಾನತುಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸರ್ಕಲ್ ಇನ್ಸ್ಪೆಕ್ಟರ್ ವಿಜಿ ಕುಮಾರ್ ಹಾಗೂ ಸಿಬ್ಬಂದಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು ಪ್ರತಿಭಟನಾಕಾರರು ಪ್ರತಿಭಟನೆಯನ್ನು ಕೈಬಿಡಲಿಲ್ಲ.
ಇದನ್ನೂ ಓದಿ : ಬಾಗೇಪಲ್ಲಿ | ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಬಡವರಿಗೆ ಅನ್ಯಾಯ : ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು.ಬಸವರಾಜು ವಾಗ್ದಾಳಿ
ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಾಬು ಜಗಜೀವನ್ ರಾಮ್ ಭಾವಚಿತ್ರ ಕಸದಲ್ಲಿ ಬಿಸಾಡಿರುವವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುವ ಭರವಸೆ ನೀಡಿ, ಪ್ರತಿಭಟನೆಯನ್ನು ತಿಳಿಗೊಳಿಸಿದರು.