ನಬಾರ್ಡ್‌ನಿಂದ ರೈತರಿಗೆ ಅನ್ಯಾಯ, ಕೈಚೆಲ್ಲಿದ ಕೇಂದ್ರ ಸಚಿವರು: ಸಿಎಂ ಸಿದ್ದರಾಮಯ್ಯ

Date:

Advertisements

ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕ್‌ಗಳಲ್ಲಿ ಶೇ.10 ರಿಂದ 12 ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ನವದೆಹಲಿಯಲ್ಲಿ ಗುರುವಾರ ರಾತ್ರಿ ಮಾಧ್ಯಮದವರೊಂದಿಗೆ ಮಾತನಾಡಿ, “ಈ ಬಗ್ಗೆ ಪ್ರಧಾನಮಂತ್ರಿ, ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದು, ಇದನ್ನು ಆರ್.ಬಿ.ಐ ಒಪ್ಪಿಲ್ಲ ಎಂದು ಸಚಿವರು ಉತ್ತರವನ್ನೂ ಬರೆದಿದ್ದಾರೆ. ನಬಾರ್ಡ್ ಕೇಂದ್ರ ಸರ್ಕಾರದ ಕೆಳೆಗೆ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ” ಎಂದು ಕೇಳಿದ್ದಾರೆ.

“ನಬಾರ್ಡ್‌ನಲ್ಲಿ ಕಳೆದ ವರ್ಷ 5,600 ಕೋಟಿ ರೂ.ಗಳನ್ನು ಅಲ್ಪಾವಧಿ ಸಾಲಕ್ಕಾಗಿ ನೀಡಲಾಗಿತ್ತು. ಈ ವರ್ಷ 2,340 ಕೊಟಿ ರೂ.ಗಳನ್ನು ನೀಡಿದ್ದಾರೆ. 3,220 ಕೋಟಿ ರೂ.ಗಳನ್ನು ಕಡಿತಗೊಳಿಸಲಾಗಿದೆ. 58% ರಷ್ಟು ಕಡಿಮೆ ಮಾಡಿರುವುದು ರೈತರಿಗೆ ಮಾಡಿರುವ ದ್ರೋಹ. ನಬಾರ್ಡ್ ಶೇ.4.50 ಬಡ್ಡಿ ದರದಲ್ಲಿ ಸಾಲ ಕೊಡುತ್ತಾರೆ. 5 ವರ್ಷಗಳ ಅಂಕಿ ಅಂಶಗಳನ್ನು ತೆಗೆದು ನೋಡಿದರೆ 5,000 ಕೋಟಿ ರೂ.ಗಳಿದೆ. ಸಾಲ ಕೊಡುವುದು ಯಾವಾಗಲೂ ಹೆಚ್ಚಾಗುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ” ಎಂದರು.

Advertisements

“ಎಲ್ಲ ರಾಜ್ಯಗಳಿಗೂ ಕಡಿತ ಮಾಡಲಾಗಿದೆ. ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವರಿಸಲಾಗಿದೆ. ಆರು ವರ್ಷಗಳಿಂದ ಜಾಸ್ತಿ ಕೊಟ್ಟಿದ್ದು, ಈಗ ಕಡಿಮೆ ಮಾಡಿದರೆ ಹೇಗೆ? ನಮ್ಮ ಸರ್ಕಾರದ ವತಿಯಿಂದ 5 ಲಕ್ಷದವರೆಗೆ ಬಡ್ಡಿರಹಿತವಾಗಿ ಸಾಲ ನೀಡಲಾಗುತ್ತಿದೆ. ಶೇ.4.50 ಬಡ್ಡಿ ಕೊಡುವುದು ನಮ್ಮ ಸರ್ಕಾರ ದೀರ್ಘಾವಧಿ ಮತ್ತು ಮಧ್ಯಮಾವಧಿ ಸಾಲವನ್ನು 5-15 ಲಕ್ಷದವರೆಗೆ ಶೇ.3 ಬಡ್ಡಿದರದಲ್ಲಿ ನೀಡಲಾಗುತ್ತಿದೆ. 1,200 ಕೋಟಿಗಳಿಗಿಂತಲೂ ಹೆಚ್ಚು ಬಡ್ಡಿಯನ್ನು ನೀಡುತ್ತೇವೆ. ಈ ಬಗ್ಗೆ ಆರ್.ಅಶೋಕ್, ಬಿ.ಎಸ್.ಯಡಿಯೂರಪ್ಪ, ಯತ್ನಾಳ್, ಸಿ.ಟಿ.ರವಿ, ಹೆಚ್.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ ಮಾತನಾಡುವುದಿಲ್ಲ” ಎಂದು ಹರಿಹಾಯ್ದರು.

ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

“ನಬಾರ್ಡ್‌ನಿಂದ ರಿಯಾಯಿತಿ ಬಡ್ಡಿದರದಲ್ಲಿ ನೀಡಲಾಗುವ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸಲು ಸಾಧ್ಯವಿಲ್ಲ. ರಾಷ್ಟ್ರೀಕೃತ ಬ್ಯಾಂಕ್‌ಗಳು ಜನರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತಿವೆ. ಹೀಗಾಗಿ, ನಬಾರ್ಡ್ ಮೂಲಕ ನೀಡುತ್ತಿರುವ ಕೃಷಿ ಸಾಲದ ಮೊತ್ತವನ್ನು ಕಡಿತಗೊಳಿಸಲಾಗಿದೆ. ಜತೆಗೆ, ಎಲ್ಲ ರಾಜ್ಯಗಳ ಮೊತ್ತವನ್ನು ಕಡಿತಗೊಳಿಸಲಾಗಿದೆ. ಕರ್ನಾಟಕದ ಮೊತ್ತ ಮಾತ್ರ ಕಡಿತವಾಗಿದ್ದಲ್ಲ” ಸಿಎಂ ನಿಯೋಗಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮಜಾಯಿಷಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X