India vs Australia Test | ಮೊದಲ ದಿನವೇ ಮುಗ್ಗರಿಸಿದ ಭಾರತ, 150 ರನ್‌ಗೆ ಆಲ್‌ಔಟ್‌

Date:

Advertisements

ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿರುವ ಭಾರತ ಮೊದಲ ದಿನವೇ ಮುಗ್ಗರಿಸಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವ ಟೀಮ್ ಇಂಡಿಯಾ 49.4 ಓವರ್‌ಗಳಲ್ಲಿ 150 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದಿನಿಂದ ಆರಂಭವಾಗಿದೆ. ಭಾರತ ತಂಡವು 32 ರನ್ ಗಳಿಸುವಷ್ಟರಲ್ಲಿ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ವಿರಾಟ್‌ ಕೊಹ್ಲಿ ವೈಫಲ್ಯ ಕಂಡಿದ್ದು, ಜೈಸ್ವಾಲ್, ಪಡಿಕ್ಕಲ್ ಶೂನ್ಯಕ್ಕೆ ಔಟ್ ಆದರು.

Advertisements

ತಂಡದ ಪರ ನಿತೀಶ್ ಕುಮಾರ್ ರೆಡ್ಡಿ ಗರಿಷ್ಠ 41 ರನ್ ಗಳಿಸಿದರು. ರಿಷಭ್ ಪಂತ್ 37 ಹಾಗೂ ಕೆ.ಎಲ್. ರಾಹುಲ್ 26 ರನ್ ಗಳಿಸಿದರು. ವಿರಾಟ್ ಕೊಹ್ಲಿ, ದೇವದತ್ತ ಪಡಿಕ್ಕಲ್, ಧ್ರುವ್ ಜುರೇಲ್ ಹಾಗೂ ವಾಷಿಂಗ್ಟನ್ ಸುಂದರ್ ಸಹ ವೈಫಲ್ಯ ಅನುಭವಿಸಿದರು. ಈ ಪೈಕಿ ಯಶಸ್ವಿ ಜೈಸ್ವಾಲ್ ಹಾಗೂ ದೇವದತ್ತ ಪಡಿಕ್ಕಲ್ ಖಾತೆ ತೆರೆಯುವಲ್ಲಿ ವಿಫಲರಾದರು.

ಚೊಚ್ಚಲ ಪಂದ್ಯ ಆಡುತ್ತಿರುವ ನಿತೀಶ್ 41 ರನ್ ಗಳಿಸಿದರು. ಇನ್ನುಳಿದಂತೆ ಧ್ರುವ್ ಜುರೇಲ್ 11, ವಾಷಿಂಗ್ಟನ್ ಸುಂದರ್ 4, ಹರ್ಷೀತ್ ರಾಣಾ 7 ಮತ್ತು ಜಸ್‌ಪ್ರೀತ್ ಬೂಮ್ರಾ 8 ರನ್ ಗಳಿಸಿ ನಿರ್ಗಮಿಸಿದರು. ಆಸ್ಟ್ರೇಲಿಯಾದ ಪರ ಜೋಶ್ ಹ್ಯಾಜಲ್‌ವುಡ್ ನಾಲ್ಕು, ನಾಯಕ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಹಾಗೂ ಮಿಚೆಲ್ ಮಾರ್ಷ್ ತಲಾ ಎರಡು ವಿಕೆಟ್‌ಗಳನ್ನು ಹಂಚಿಕೊಂಡರು.

ಅನುಭವಿ ಬ್ಯಾಟ‌ರ್ ವಿರಾಟ್ ಕೊಹ್ಲಿ ಐದು ರನ್ ಗಳಿಸಿ ನಿರ್ಗಮಿಸಿದರು. ಆ ಮೂಲಕ ಕೊಹ್ಲಿ ಅವರ ಕಳಪೆ ಪ್ರದರ್ಶನ ಮುಂದುವರಿಯಿತು. ಭಾರತೀಯ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ರಕ್ಷಣಾತ್ಮಕ ಆಟವು ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X