ಇಂದಿನಿಂದ 2,000 ರೂ. ನೋಟು ಬದಲಾವಣೆ; ಆಧಾರ್ ಕಡ್ಡಾಯವಾ?

Date:

Advertisements

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 2,000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಿಸಿದೆ. ಇಂದಿನಿಂದ (ಮಂಗಳವಾರ) ಸಾರ್ವಜನಿಕರು 2,000 ರೂ. ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಿರುವುದಾಗಿ ಹೇಳಿದೆ.

ಎಲ್ಲ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‌ಗಳಲ್ಲಿ ಜನರು 2,000 ರೂ. ನೋಟುಗಳನ್ನು ನೀಡಿ, 500, 200, 100 ರೂ. ಮುಖಬೆಲೆಯ ನೋಟುಗಳನ್ನು ಪಡೆದುಕೊಳ್ಳಬಹುದಾಗಿದೆ. ನೋಟು ಬದಲಾವಣೆಗೆ ಜನರು ಯಾವ ರೀತಿಯ ಕ್ರಮಗಳನ್ನು ಅನುಸರಿಸಬೇಕು ಎಂದೂ ಆರ್‌ಬಿಐ ಹೇಳಿದೆ.

ನೋಟು ಬದಲಾವಣೆಗಾಗಿ ಆರ್‌ಬಿಐ ಅರ್ಜಿ ಬಿಡುಗಡೆ ಮಾಡಿದೆ. ಎಲ್ಲ ಬ್ಯಾಂಕ್‌ಗಳಲ್ಲಿಯೂ ಈ ಅರ್ಜಿ ದೊರೆಯಲಿದೆ. ಹಣ ಬದಲಾವಣೆ ಮಾಡಬಯಸುವವರು ಅರ್ಜಿಯನ್ನು ಭರ್ತಿ ಮಾಡಿ, ಅರ್ಜಿ ಮತ್ತು 2,000 ರೂ. ನೋಟುಗಳನ್ನು ಬ್ಯಾಂಕ್‌ಗಳಿಗೆ ಸಲ್ಲಿಸಿ, ನೋಟುಗಳನ್ನು ಬದಲಿಸಿಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ.

Advertisements

ಹಣವನ್ನು ಠೇವಣಿ ಇಡುವವರು ಅಥವಾ ತಮ್ಮ ಖಾತೆಗಳಿಗೆ ಜಮೆ ಮಾಡುವವರು ಈ ಅರ್ಜಿಯನ್ನು ಭರ್ತಿ ಮಾಡಬೇಕಿಲ್ಲ. ಅಂತಹವರು ತಾವು ಖಾತೆ ಹೊಂದಿರುವ ಬ್ಯಾಂಕ್‌ಗಳಿಗೆ ಹೋಗಿ, ಚಲನ್ ಭರ್ತಿ ಮಾಡಿ, 2,000 ರೂ. ನೋಟುಗಳನ್ನು ಜಮೆ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ತಿಳಿಸಿದೆ.

ಈ ನಡುವೆ, ನೋಟು ಬದಲಾವಣೆಗೆ ಆಧಾರ್ ಕಾರ್ಡ್‌ ಕಡ್ಡಾಯವಾ ಎಂಬ ಚರ್ಚೆಯೂ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ. ಈ ಬಗ್ಗೆ ಎಸ್‌ಬಿಐ ಸ್ಪಷ್ಟನೆ ನೀಡಿದ್ದು, ಹಣ ಬದಲಾವಣೆಗೆ ಯಾವುದೇ ದಾಖಲೆ ಬೇಕಿಲ್ಲವೆಂದು ಹೇಳಿದೆ.

ಒಬ್ಬ ವ್ಯಕ್ತಿ ಒಮ್ಮೆಗೆ 10 ನೋಟುಗಳನ್ನು ಬದಲಿಸಿಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ. ಅಲ್ಲದೆ, ಆರ್‌ಬಿಐ ಹೊರಡಿಸಿರುವ ಸೂಚನೆಯಂತೆ ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶವಿದೆ.

ಈ ಸುದ್ದಿ ಓದಿದ್ದೀರಾ?: ಕೇಜ್ರಿವಾಲ್ ನಿಯಂತ್ರಿಸಲು ‘ಸುಪ್ರೀಂ’ ಆದೇಶ ಧಿಕ್ಕರಿಸಿ ಸುಗ್ರೀವಾಜ್ಞೆ ಹೊರಡಿಸಿದ ಮೋದಿ ಸರ್ಕಾರ

ಆರ್‌ಬಿಐ ನಿರ್ಧಾರ ವಿರುದ್ಧ ಸಾರ್ವಜನಿಕ ಮತ್ತು ರಾಜಕೀಯ ವಲಯದಲ್ಲಿ ಟೀಕೆಗಳು, ವಿರೋಧಗಳು ವ್ಯಕ್ತವಾಗುತ್ತಿವೆ. ಕೇಂದ್ರ ಸರ್ಕಾರದ ನಡೆಯು ಮೂರ್ಖತನದ್ದು ಎಂದಿರುವ ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರಂ, ”ಕಪ್ಪುಹಣ ಹೊಂದಿರುವವರಿಗೆ ಸುಲಭವಾಗಿ ಹಣ ಕೂಡಿಡಲು ಈ 2,000 ಮುಖಬೆಲೆಯು ನೋಟುಗಳು ಸಹಾಯ ಮಾಡಿವೆ. ಅಲ್ಲದೆ, ಈಗ ಮತ್ತೆ 2,000 ಮುಖಬೆಲೆಯ ನೋಟು ಬ್ಯಾನ್ ಮಾಡಿ ಆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವರಿಗೆ ‘ರತ್ನಗಂಬಳಿ ಹಾಸಿ ಸ್ವಾಗತ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X