ಬೀದರ್‌ | 10 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬುಡಾ ಆಯುಕ್ತ

Date:

Advertisements

ಕೃಷಿಯೇತರ ಜಮೀನಿನ (ಎನ್‌ಎ) ನಿವೇಶನಗಳ ಮಾರಾಟದ ಅನುಮತಿಗಾಗಿ ₹10 ಲಕ್ಷ ನಗದು ಲಂಚ ಸ್ವೀಕರಿಸುತ್ತಿದ್ದ ವೇಳೆ ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಆಯುಕ್ತ ಸೇರಿದಂತೆ ಮೂವರು ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬುಡಾ ಆಯುಕ್ತ ಶ್ರೀಕಾಂತ ಚಿಮಕೋಡೆ, ಸದಸ್ಯ ಚಂದ್ರಕಾಂತ ರೆಡ್ಡಿ ಹಾಗೂ ಇವರ ಆಪ್ತ ಸಿದ್ದು ಹೂಗಾರ ಎಂಬಾತನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೀದರ್ ನಗರದ ಚಿಕ್ಕಪೇಟೆಯಲ್ಲಿ ಸರ್ವೇ ನಂಬರ್‌ 26ರಲ್ಲಿ ಕೃಷಿಯೇತರ ಜಮೀನಿನ ಶೇ 60ರಷ್ಟು ನಿವೇಶನಗಳನ್ನು ಬಿಡುಗಡೆ ಮಾಡಿ, ಅವುಗಳ ಮಾರಾಟಕ್ಕೆ ಅನುಮತಿ ಕೊಡಲು ಶ್ರೀಕಾಂತ ಹಾಗೂ ಚಂದ್ರಕಾಂತ ಅವರು ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ₹10 ಲಕ್ಷ ಮುಂಗಡ ಕೊಡುವುದರ ಬಗ್ಗೆ ಮಾತುಕತೆಯಾಗಿತ್ತು. ಬೀದರ್‌ನ ಪ್ರತಾಪ ನಗರದ ದಾಲ್‌ಮಿಲ್‌ ಸಮೀಪ ಶ್ರೀಕಾಂತ ಹಾಗೂ ಚಂದ್ರಕಾಂತ ಅವರ ಆಪ್ತ ಸಿದ್ದು ಹೂಗಾರ ಎಂಬಾತ ₹10 ಲಕ್ಷ ನಗದು ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿ, ನಗದು ಹಣದೊಂದಿಗೆ ವಶಕ್ಕೆ ಪಡೆಯಲಾಯಿತು. ಆನಂತರ ಶ್ರೀಕಾಂತ ಹಾಗೂ ಚಂದ್ರಕಾಂತ ಅವರನ್ನೂ ವಶಕ್ಕೆ ಪಡೆಯಲಾಗಿದೆʼ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಅದಾನಿ ಬಂಧನ ಏಕಿಲ್ಲ, ಅವರನ್ನು ರಕ್ಷಿಸುತ್ತಿರುವವರು ಯಾರು: ಸಿದ್ದರಾಮಯ್ಯ ಪ್ರಶ್ನೆ

ರಿಯಲ್‌ ಎಸ್ಟೇಟ್‌ ಉದ್ಯಮಿ ಸತೀಶ ನೌಬಾದೆ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಕಲಬುರಗಿ ಲೋಕಾಯುಕ್ತ ಎಸ್ಪಿ ಉಮೇಶ ಬಿ.ಕೆ. ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಡಿವೈಎಸ್ಪಿ ಹಣಮಂತರಾಯ, ಪೊಲೀಸ್‌ ಇನ್‌ಸ್ಪೆಕ್ಟರ್‌ಗಳಾದ ಸಂತೋಷ ರಾಠೋಡ್‌, ಬಾಬಾಸಾಹೇಬ್‌ ಪಾಟೀಲ, ಅರ್ಜುನಪ್ಪ, ಸಿಬ್ಬಂದಿ ವಿಷ್ಣುರಡ್ಡಿ, ಶ್ರೀಕಾಂತ, ಶಾಂತಲಿಂಗಪ್ಪ, ವಿಜಯಶೇಖರ, ಅಡೆಪ್ಪ, ಕಿಶೋರಕುಮಾರ, ಕುಶಾಲ, ಭರತ, ಶುಕ್ಲೋಧನ, ಸುವರ್ಣಾ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X