ರಾಜ್ಯದ ನೂತನ ಅಡ್ವೊಕೇಟ್‌ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

Date:

Advertisements

ರಾಜ್ಯ ನೂತನ ಅಡ್ವೊಕೇಟ್‌ ಜನರಲ್ ಆಗಿ ಹಿರಿಯ ವಕೀಲ ಮತ್ತು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಪುತ್ರ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಅಡ್ವೊಕೇಟ್‌ ಜನರಲ್‌ (ಎಜಿ) ಆಯ್ಕೆ ಅಧಿಕಾರವನ್ನು ಮುಖ್ಯಮಂತ್ರಿಗೆ ನೀಡಲಾಗಿತ್ತು. ಅದರಂತೆ ಹೈಕೋರ್ಟ್ ನ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅಡ್ವೊಕೇಟ್ ಜನರಲ್ ಆಗಿದ್ದ ಪ್ರಭುಲಿಂಗ ನಾವದಗಿ ಅವರು ಇತ್ತೀಚಿಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾಗಿದ್ದ ಎಜಿ ಸ್ಥಾನಕ್ಕೆ ಇದೀಗ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

Advertisements

ಶಶಿಕಿರಣ್ ಶೆಟ್ಟಿ ಅವರ ಹಿನ್ನೆಲೆ

47 ವರ್ಷದ ಶಶಿಕಿರಣ್ ಶೆಟ್ಟಿ ಹಿರಿಯ ವಕೀಲರಾಗಿದ್ದಾರೆ. ಮಾಜಿ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿಯವರ ಕಿರಿಯ ಪುತ್ರ. 1975ರ ಸೆಪ್ಟೆಂಬರ್ 13 ರಂದು ಶಶಿಕಿರಣ್ ಶೆಟ್ಟಿ ಜನಿಸಿದರು. ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (ಎನ್‌ಎಲ್‌ಎಸ್‌ಐಯು) ಹಳೆಯ ವಿದ್ಯಾರ್ಥಿಯಾಗಿದ್ದು, ಅಲ್ಲಿ ಅವರು 1998 ರಲ್ಲಿ ಬಿಎಎಲ್‌ಪಿ (ಆನರ್ಸ್) ಪದವಿ ಪಡೆದರು.

ಶಶಿಕಿರಣ್ ಶೆಟ್ಟಿ ಅವರು ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‌ನಲ್ಲಿ ವಕೀಲರಾಗಿ ಅಭ್ಯಾಸ ಮಾಡಿದ್ದಾರೆ. ಇವರನ್ನು 2014 ರಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಹಿರಿಯ ವಕೀಲರಾಗಿ ನೇಮಿಸಲಾಯಿತು. ಸತತ 23 ವರ್ಷಗಳ ಕಾಲ ಕಾನೂನು ಕ್ಷೇತ್ರದಲ್ಲಿದ್ದಾರೆ. ಸಂವಿಧಾನದ ಕಾನೂನು, ಆಡಳಿತಾತ್ಮಕ ಕಾನೂನು, ಕೌಟುಂಬಿಕ ಕಾನೂನು, ಗಣಿಗಾರಿಕೆ, ಸಾಲ ವಸೂಲಾತಿ ಮತ್ತು ಬ್ಯಾಂಕಿಂಗ್ ಸೇರಿದಂತೆ ಹಲವಾರು ಪ್ರಕರಣಗಳನ್ನು ನಿರ್ವಹಿಸಿದ್ದಾರೆ. ಪ್ರಸ್ತುತ, ಅವರು ಬೆಂಗಳೂರಿನ ಪ್ರಮುಖ ಕಾನೂನು ಸಂಸ್ಥೆಯಾದ ಶೆಟ್ಟಿ ಮತ್ತು ಹೆಗ್ಡೆ ಅಸೋಸಿಯೇಟ್ಸ್‌ನಲ್ಲಿ ವ್ಯವಸ್ಥಾಪಕ ಮುಖ್ಯಸ್ಥರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಳೆದ ಎರಡು ವರ್ಷಗಳಲ್ಲಿ ರಾಜ್ಯಸಭಾ ಸದಸ್ಯರಿಗೆ ನೀಡಿದ ಸಂಬಳ, ಭತ್ಯೆಗಳೆಷ್ಟು ಗೊತ್ತೆ?

2019ರಲ್ಲಿ ರಾಜ್ಯದಲ್ಲಿ 14 ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಕೆಪಿಸಿಸಿ ಪರ ಶಶಿಕಿರಣ್ ಶೆಟ್ಟಿ ವಾದಿಸಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾದ ಮಂಡಿಸಿದ್ದರು. ರಾಜ್ಯದಲ್ಲಿನ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿಯನ್ನು ಹಿಂದೆಗೆದುಕೊಂಡಿದ್ದ ಬಿಜೆಪಿ ಸರ್ಕಾರ ಕೈಗೊಂಡ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X