ಕೋಲಾರ | ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪದಬಳಕೆ; ಕಾಂಗ್ರೆಸ್‌ ದೂರು

Date:

Advertisements

ಸಿಎಂ, ಡಿಸಿಎಂ ಸೇರಿದಂತೆ ಕೆಲ ಸಚಿವರನ್ನು ಅಸಭ್ಯ ಪದಗಳ ಮೂಲಕ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವ ಚಿಕ್ಕಬಳ್ಳಾಪುರ ಮೂಲದ ಮೋಹಿತ್ ನರಸಿಂಹಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಎಸ್ಪಿ ಬಿ ನಿಖಿಲ್ ಅವರಿಗೆ ದೂರು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೋಲಾರ ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಾಗಿನಿಂದ ವಿನಾಕಾರಣ ಸಿಎಂ, ಡಿಸಿಎಂ, ದಲಿತ ಸಚಿವರು ಸೇರಿದಂತೆ ಪಕ್ಷದ ನಾಯಕರು, ಮುಖಂಡರ ವಿರುದ್ದ ಅಸಭ್ಯವಾಗಿ ವರ್ತಿಸುವವರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಮೋಹಿತ್ ನರಸಿಂಹಮೂರ್ತಿ ಎಂಬ ವ್ಯಕ್ತಿಯ ಉದ್ಧಟತನವೂ ಜಾಸ್ತಿಯಾಗಿದ್ದು ಕೂಡಲೇ ಕ್ರಮವಹಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಪ್ರತಿಭಟನೆ

Advertisements

ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ವಿರುದ್ದವೇ ಹೀನಾಯವಾಗಿ ಏಕವಚನದಲ್ಲಿ ಸಂಭೋದಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನು ಹರಿಬಿಟ್ಟು ತನ್ನ ನೀಚ ಸಂಸ್ಕೃತಿಯನ್ನು ಪ್ರದರ್ಶಿಸಿದ್ದಾನೆ. ಇದರಿಂದ ಸಮಾಜದ ಶಾಂತಿ ಭಂಗವಾಗುವ ಸಾಧ್ಯತೆಗಳಿದ್ದು, ಈತನ ವಿರುದ್ಧ ಕೂಡಲೇ ಸೂಕ್ತ ಕ್ರಮಕೈಗೊಂಡು ಕಠಿಣ ಶಿಕ್ಷೆ ವಿಧಸಬೇಕು. ಇನ್ನು ಮುಂದೆ ಇಂತಹ ಕಿಡಿಗೇಡಿಗಳು ಸಾಮಾಜಿಕ ಜಾಲತಾಣವನ್ನು ದುರುಪಯೋಗಪಡಿಸಿಕೊಳ್ಳಲು ಅವಕಾಶ ಮಾಡಿಕೊಡಬಾರದು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಎಸ್ಪಿ ಬಿ ನಿಖಿಲ್, ಈ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ, ಸಂಬಂಧಿಸಿದ ಜಿಲ್ಲೆಯವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ವಿಕ್ರಂನಂತಹ ಬಡವರು ಯಾಕೆ ನಕ್ಸಲರಾಗುತ್ತಾರೆ? ಹೊರ ಬಂದವರಿಗೆ ಸರ್ಕಾರ ಮಾಡುತ್ತಿರುವುದೇನು?

ಈ ವೇಳೆ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್, ಪದವೀಧರ ಘಟಕದ ಅಧ್ಯಕ್ಷ ಸುಧೀರ್, ಕಾರ್ಮಿಕ ಘಟಕದ ಹೊನ್ನೇನಹಳ್ಳಿ ಯಲ್ಲಪ್ಪ, ಒಬಿಸಿ ಘಟಕದ ಮಂಜುನಾಥ್, ಮುಖಂಡರಾದ ವೆಂಕಟಪತಿಯಪ್ಪ, ನಾಗರಾಜಗೌಡ, ಪರ್ವೇಜ್, ರಾಮಯ್ಯ, ಹರೀಷ್, ಎನ್.ಟಿ.ಆರ್ ಮಂಜುನಾಥ್ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X