ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಕೆಲ ದಿನಗಳ ಹಿಂದಿನವರೆಗೆ ಬಿಜೆಪಿಯಲ್ಲಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿ.ಪಿ.ಯೋಗೇಶ್ವರ್ ನಡುವೆ ಹಣಾಹಣಿ ಏರ್ಪಟ್ಟಿದೆ.
9ನೇ ಸುತ್ತಿನಲ್ಲಿ ಏಕಾಏಕಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಕಳೆದ ಸುತ್ತಿನವರೆಗೂ 500 ರಿಂದ 1 ಸಾವಿರ ಮತಗಳ ಅಂತರದಲ್ಲಿ ಹಿನ್ನಡೆ ಅನುಭವಿಸಿದ್ದ ಸಿಪಿವೈ ಏಳನೇ ಸುತ್ತಿನಲ್ಲಿ 3,925 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದರು. ಈಗ 20 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆಯಲ್ಲಿದ್ದಾರೆ.
ಕುಮಾರಸ್ವಾಮಿ ಕ್ಷೇತ್ರದಲ್ಲಿ ಮಗನಿಗೆ ಆರಂಭಿಕ ಆಘಾತ ಎದುರಾಗಿದೆ. ಈ ಮುನ್ನಡೆ ಹೀಗೆ ಮುಂದುವರಿದರೆ ಸಿ ಪಿ ಯೋಗೇಶ್ವರ್ ಗೆಲ್ಲುವ ಸಾಧ್ಯತೆ ಹೆಚ್ಚಿದೆ.
ಚನ್ನಪಟ್ಟಣದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಿಪಿ ಯೋಗೇಶ್ವರ್ 11,178 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ 34808 ಮತ ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ 45982 ಮತಗಳನ್ನು ಪಡೆದಿದ್ದಾರೆ.