ರಾಜ್ಯದ ಗಮನ ಸೆಳೆದಿದ್ದ ಗೊಂಬೆಗಳ ನಾಡು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ.
ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಯೋಗೇಶ್ವರ್ ಗೆಲುವಿನ ನಗೆ ಬೀರಿದ್ದಾರೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಪುತ್ರ ನಿಖಿಲ್ ಕುಮಾರಸ್ವಾಮಿಗೆ ಮತ್ತೊಮ್ಮೆ ಆಘಾತವಾಗಿದೆ. ಮಂಡ್ಯ ಲೋಕಸಭೆ, ರಾಮನಗರ ವಿಧಾನಸಭೆ ಹಾಗೂ ಈಗ ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಸೋಲು ಮುಂದುವರಿದಿದೆ.
ಯೋಗೇಶ್ವರ್ ಗೆಲುವನ್ನು ಚುನಾವಣೆ ಆಯೋಗದಿಂದ ಅಧಿಕೃತ ಘೋಷಿಸಬೇಕಿದೆ. ಸಿ ಪಿ ಯೋಗೇಶ್ವರ್ ಬೆಂಬಲಿಗರು ಸಂಭ್ರಮಿಸುತ್ತಿದ್ದಾರೆ.
ಮಾಹಿತಿ ಅಪ್ಡೇಟ್ ಆಗಲಿದೆ…