ಚನ್ನಪಟ್ಟಣ | ಸಚಿವ ಜಮೀರ್ ಭಾವಚಿತ್ರಕ್ಕೆ ಮುತ್ತಿಟ್ಟು ಸಂಭ್ರಮ, ನಿಂದನೆಗಳಿಂದ ಬಚಾವ್

Date:

Advertisements

ಈ ಬಾರಿಯ ಉಪಚುನಾವಣೆಯಲ್ಲಿ ಹೈ ವೊಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿದ್ದ ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮೊದಲ 6 ಸುತ್ತಿನಲ್ಲಿ ನಿಖಿಲ್‌ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ ಓಪನ್‌ ಆಗುತ್ತಿದ್ದಂತೆ ಯೋಗೇಶ್ವರ್‌ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್‌ ಕೊನೆಯವರೆಗೂ ಉಳಿಸಿಕೊಂಡು ಬರುವ ಮೂಲಕ, ಗೆಲುವು ಸಾಧಿಸಿದ್ದಾರೆ.

WhatsApp Image 2024 11 23 at 1.08.39 PM

ಯೋಗೇಶ್ವರ್‌ಗೆ ಅವರಿಗೆ ಬಾರಿ ಸೋಲಿನ ಅನುಕಂಪ ಕೈ ಹಿಡಿದಿದೆ. ಎರಡು ಬಾರಿ ಶಾಸಕರಾಗಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಬರಲಿಲ್ಲ ಎಂಬ ಬೇಸರ ಇತ್ತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ನಂತರ ಡಿಕೆ ಬ್ರದರ್ಸ್ ಚನ್ನಪಟ್ಟಣವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು.

Advertisements

ಇನ್ನು, ಚನ್ನಪಟ್ಟಣದಲ್ಲಿ ಜಮೀರ್ ಹೇಳಿಕೆಯಿಂದ ಕಾಂಗ್ರೆಸ್ ಹಿನ್ನಡೆಯಾಗಿದೆ ಎನ್ನಲಾಗಿತ್ತು. ಆದರೆ ಸಚಿವ ಜಮೀರ್ 20 ಸಾವಿರ ಅಂತರದಲ್ಲಿ ಯೋಗೇಶ್ವರ್ ಗೆಲ್ಲುತ್ತಾರೆ. ಬರೆದಿಟ್ಟುಕೊಳ್ಳಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಅಲ್ಲದೇ, ಮತದಾನ ನಡೆದ ಬಳಿಕ ಮಾತನಾಡಿದ್ದ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್, “ಹೆಚ್‌ ಡಿ ಕುಮಾರಸ್ವಾಮಿ ಕುರಿತು ಸಚಿವ ಜಮೀರ್‌ ಅಹಮದ್‌ ನೀಡಿದ ಹೇಳಿಕೆ ಕ್ಷೇತ್ರದಲ್ಲಿ ಪರಿಣಾಮ ಬೀರಿದೆ. ಇದರಿಂದ ನನಗೆ ಬರುವ ಒಂದಿಷ್ಟು ಮತಗಳ ಬಂದಂತೆ ಕಾಣುತ್ತಿಲ್ಲ. ನಾನು ನಿರೀಕ್ಷಿಸಿದ ಮತಗಳಲ್ಲಿ ಹಿನ್ನಡೆಯಾಗಲಿದೆ” ಎಂದಿದ್ದರು. ಇದರಿಂದಾಗಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸುತ್ತಾರೆ, ಫಲಿತಾಂಶಕ್ಕೂ ಮುನ್ನವೇ ಯೋಗೇಶ್ವರ್ ಸೋಲೊಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ವ್ಯಂಗ್ಯವಾಡಿದ್ದರು. ಆದರೆ, ಇಂದಿನ ಫಲಿತಾಂಶ ಎಲ್ಲರ ಲೆಕ್ಕವನ್ನೂ ತಲೆಕೆಳಗಾಗಿಸಿದೆ.

ನಿಂದನೆಗಳಿಂದ ಬಚಾವಾದ ಸಚಿವ ಜಮೀರ್

ಒಂದು ವೇಳೆ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಸೋತಿದ್ದಿದ್ದರೆ, ಸಚಿವ ಜಮೀರ್ ಅವರ ಹೇಳಿಕೆಯೆ ಕಾರಣ ಎಂದು ಎಲ್ಲರೂ ಟ್ರೋಲ್ ಸಹಿತ ನಿಂದನೆಗೂ ಗುರಿ ಮಾಡುತ್ತಿದ್ದರು. ಆದರೆ, ಮತದಾರರು ‘ಮನೆ ಮಗ’ ಎಂದು ಯೋಗೇಶ್ವರ್ ಅವರನ್ನು ಕೈ ಹಿಡಿದಿದ್ದರಿಂದ ಗೆಲುವು ಸಾಧಿಸಿದ್ದಾರೆ. ಜೊತೆಗೆ, ಸಚಿವ ಜಮೀರ್ ಅಹ್ಮದ್ ಕೂಡ ನಿಂದನೆಗಳಿಂದ ಬಚಾವಾಗಿದ್ದಾರೆ.

ಇದನ್ನು ಓದಿದ್ದೀರಾ? ಶಿಗ್ಗಾಂವಿ | ಬಹುವರ್ಷಗಳ ನಂತರ‌ ಹಾರಿದ ಕಾಂಗ್ರೆಸ್ ಬಾವುಟ, ಯಾಸೀರ್ ಅಹ್ಮದ್ ಖಾನ್ ಪಠಾಣ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆಯೇ, ಕೆಲವು ಕಾಂಗ್ರೆಸ್ ಕಾರ್ಯಕರ್ತರು, ಜಮೀರ್ ಅಹ್ಮದ್ ಅಭಿಮಾನಿಗಳು ಪೋಸ್ಟರ್ ಹಿಡಿದುಕೊಂಡು, ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X