ಮಂಡ್ಯ | ದೇವಾಲಯ ಕಾಮಗಾರಿ ಉದ್ಘಾಟನೆಗೆ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್‌

Date:

Advertisements

‌ಮೈಸೂರು ಅರಮನೆಯ ಸಂಪ್ರದಾಯವನ್ನು ಮುಂದುವರಿಸಲು ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಆದ್ಯತೆ ನೀಡಿದ್ದೇನೆ. ರಾಜಕೀಯಕ್ಕೆ ಪ್ರವೇಶಿಸಲು ಆಸಕ್ತಿ ಇಲ್ಲ ಎಂದು ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ಮಂಡ್ಯ ಜಿಲ್ಲೆಯ ಮದ್ದೂರಿನ ಕಾಡುಕೊತ್ತನಹಳ್ಳಿಯಲ್ಲಿರುವ 800 ವರ್ಷಗಳಷ್ಟು ಹಳೆಯದಾಗಿರುವ ವೀರಭದ್ರೇಶ್ವರ ದೇವಾಲಯದಲ್ಲಿ ದ್ವಾರ ಪೂಜೆ ಸಲ್ಲಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

“ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದ ಸಂಕೇತವಾದ ಹಳೆಯ ದೇವಾಲಯಗಳನ್ನು ಸಂರಕ್ಷಿಸುವ ಅಗತ್ಯತೆ ಇದೆ ಎಂದು ಜಾಗೃತಿ ಮೂಡಿಸಿದ್ದು, ದೇವಾಲಯದ ಆವರಣದ ಒಳಗೆ ಮತ್ತು ಹೊರಗೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ನೋಡಿಕೊಳ್ಳಬೇಕು” ಎಂದು ತಿಳಿಸಿದರು.

Advertisements

ಮದ್ದೂರಿನ ಕಾಡುಕೊತ್ತನಹಳ್ಳಿಯಲ್ಲಿ ಹಳೆಯ ದೇವಾಲಯವಿದ್ದ ಸ್ಥಳದಲ್ಲಿ ಗ್ರಾಮಸ್ಥರು ನವೀಕರಣ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ದೇವಾಲಯದ ಹೊರಗೆ ಹೊಸದಾಗಿ ಸ್ಥಾಪಿಸಿರುವ ಬಾಗಿಲಿಗೆ ಪೂಜೆ ಸಲ್ಲಿಸುವ ಮೂಲಕ ಯದುವೀರ್ ಅವರು ಕಾಮಗಾರಿಗಳಿಗೆ ಉದ್ಘಾಟನೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಪ್ರೇಮ ಪ್ರಕರಣ | ತುಮಕೂರಿನಿಂದ ನಾಪತ್ತೆಯಾಗಿದ್ದ ನಾಲ್ಕು ಮಕ್ಕಳು ಹಾಸನದಲ್ಲಿ ಪತ್ತೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X