ದೇವೇಗೌಡರಿಗೆ ವಿಶ್ರಾಂತ ಜೀವನ ನಡೆಸಲು ಇದು ಸೂಕ್ತ ಕಾಲ: ಗೆಲುವಿನ ಬಳಿಕ ಯೋಗೇಶ್ವರ್‌ ಮಾತು

Date:

Advertisements

ಜಿದ್ದಾಜಿದ್ದಿನಿಂದ ಕೂಡಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್‌ ಅವರು ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮಣಿಸಿ ಗೆಲುವಿನ ನಗೆ ಬೀರಿದ್ದಾರೆ.

ಸಿ ಪಿ ಯೋಗೇಶ್ವರ್ ಚನ್ನಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ.

“ಮಾಜಿ ಪ್ರಧಾನಿ ಹೆಚ್ ​ಡಿ ದೇವೇಗೌಡರ ಹಾಗೂ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ಪ್ರತಿಷ್ಠೆಗೆ ಅವರ ಮಗ ನಿಖಿಲ್ ಬಲಿಯಾಗಿದ್ದಾರೆ. ಅವರಿಬ್ಬರೂ ತಮ್ಮ ಪ್ರತಿಷ್ಠೆಗೆ ಮಗನನ್ನೇ ಬಲಿಕೊಟ್ಟಿದ್ದಾರೆ. ಇನ್ನಾದರೂ ದೇವೇಗೌಡರು ವಿಶ್ರಾಂತಿ ಜೀವನ ಕಳೆಯಲಿ. ಒಕ್ಕಲಿಗ ಸಮುದಾಯ ದೇವೇಗೌಡರ ಕುಟುಂಬವನ್ನು ತಿರಸ್ಕರಿಸಿದೆ. ಇದನ್ನು ಕುಮಾರಸ್ವಾಮಿ ಅರ್ಥಮಾಡಿಕೊಳ್ಳಬೇಕು. ಮಗನನ್ನು ಎಷ್ಟು ಭಾರಿ ಬಲಿಕೊಡುತ್ತಾರೆ ಕುಮಾರಸ್ವಾಮಿ” ಎಂದು ಪ್ರಶ್ನಿಸಿದರು.

Advertisements

“ಕುಮಾರಸ್ವಾಮಿ ಮನಸು ಮಾಡಿದ್ದರೆ ಮಗನನ್ನು ಮಂಡ್ಯದಲ್ಲಿ ಲೋಕಸಭೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಬಹುದಿತ್ತು. ಆದರೆ, ಕೇಂದ್ರ ಸಚಿವರಾಗುವ ತವಕದಿಂದ ತಾವೇ ಅಲ್ಲಿ ಸ್ಪರ್ಧಿಸಿದರು. ಮಗನನ್ನು ಬಲಿಕೊಟ್ಟರು. ದೇವೇಗೌಡರು ದೈತ್ಯ ಶಕ್ತಿ ಎಂದು ಈ ಹಿಂದೆಯೇ ಹೇಳಿದ್ದೇನೆ. ಅದು ಸತ್ಯ. ಆದರೆ, ಅವರಿಗೆ ವಯಸ್ಸಾಗಿದೆ. ಅವರನ್ನು ಜನ ಚುನಾವಣೆಯಲ್ಲಿ ತಿರಸ್ಕರಿಸಿದ್ದಾರೆ. ಹೀಗಾಗಿ ಅವರಿಗೆ ವಿಶ್ರಾಂತ ಜೀವನ ನಡೆಸಲು ಇದು ಸೂಕ್ತ ಕಾಲ. ಈ ಚುನಾವಣೆ ಫಲಿತಾಂಶ ಜೆಡಿಎಸ್​​ ಕೊನೆಯ ಕ್ಷಣಗಳನ್ನು ಎಣಿಸುತ್ತಿದೆ” ಲೇವಡಿ ಮಾಡಿದರು.

ಡಿ ಕೆ ಸುರೇಶ್ ಬೆಂಬಲಕ್ಕೆ ಬಂದರು

“ಡಿ ಕೆ ಸಹೋದರರ ಸಹಕಾರಕ್ಕೆ ಧನ್ಯವಾದ ತಿಳಿಸುವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಡಾ. ಮಂಜುನಾಥ್ ಪರ ಕೆಲಸ ಮಾಡಿ, ಡಿ ಕೆ ಸುರೇಶ್​ ಅವರನ್ನು ಸೋಲಿಸಿದ್ದೆ. ಆದರೆ, ಈ ಚುನಾವಣೆಯಲ್ಲಿ ಅದೇ ಡಿ ಕೆ ಸುರೇಶ್ ಯಾವುದನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೆ ಹೆಗಲಿಗೆ ಹೆಗಲು ಕೊಟ್ಟು ನನ್ನನ್ನು ಗೆಲ್ಲಿಸಿದರು” ಎಂದು ಕೃತಜ್ಞತೆಯಿಂದ ಹೇಳಿದರು.

“ದೇವೇಗೌಡರ ಕುಟುಂಬ ವರ್ಚಸ್ಸು ವರ್ಷದಿಂದ ವರ್ಷಕ್ಕೆ ಕುಗ್ಗುತ್ತಿದೆ. ಅವರದ್ದು ಕೇವಲ ಸ್ವಾರ್ಥದ ರಾಜಕಾರಣ. ಜನಪರ ಕಾಳಜಿ ಇದ್ದಿದ್ದರೆ ಜನ ಬೆಂಬಲಿಸುತ್ತಿದ್ದರು. ಆದರೆ, ಅವರದ್ದು ಕೇವಲ ಸ್ವಾರ್ಥದ ರಾಜಕಾರಣ. ಹಾಗಾಗಿ ಜನರು ಅವರನ್ನು ತಿರಸ್ಕರಿಸಿದ್ದಾರೆ” ಎಂದರು.

ಬಿಎಸ್​ವೈ ಕುಟುಂಬದ ವಿರುದ್ಧ ವಾಗ್ದಾಳಿ

ಬಿಎಸ್​ ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ವಿರುದ್ಧವೂ ಯೋಗೇಶ್ವರ್ ಕಿಡಿಕಾರಿದರು. ಹಿಂದೆ ಯಡಿಯೂರಪ್ಪನವರು ರಾಜಕೀಯವಾಗಿ ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ನೆರವಾಗಿದ್ದೆ. ಅವರು ಕುಟುಂಬ ರಾಜಕಾರಣ ಸ್ವಾರ್ಥದಲ್ಲಿ ನನ್ನನ್ನು ಕಡೆಗಣಿಸಿದರು. ಅವರಿಗೆ ಸೂಕ್ತ ಉತ್ತರ ದೊರೆತಿದೆ” ಎಂದು ಹೇಳಿದರು.

“ನನಗೆ ಚುನಾವಣೆ ಎಂಬುದು ಟಿ20 ಕ್ರಿಕೆಟ್ ಇದ್ದಂತೆ. ಒಮ್ಮೆ ಆ ಪಕ್ಷದಿಂದ ಮತ್ತೊಮ್ಮೆ ಈ ಪಕ್ಷದಿಂದ ಸ್ಪರ್ಧಿಸಿದ್ದೇನೆ. ನಾನು ಎಲ್ಲಿ ಹೋಗುತ್ತೇನೆ ಆ ಪಕ್ಷವನ್ನು ಗೆಲ್ಲಿಸುತ್ತೇನೆ. ಜನ ನನ್ನ ಕೈಹಿಡಿಯುತ್ತಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X