ಉಡುಪಿ | ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಕನಸು ನುಚ್ಚು ನೂರಾಗಿದೆ – ರಮೇಶ್ ಕಾಂಚನ್

Date:

Advertisements

ಕರ್ನಾಟಕ ರಾಜ್ಯದ ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಸಿ.ಪಿ ಯೋಗೇಶ್ವರ್, ಅನ್ನಪೂರ್ಣ ತುಕಾರಾಮ್ ಮತ್ತು ಯಾಸಿರ್ ಪಠಾಣ್ ಹಾಗೂ ವಯನಾಡ್ ಲೋಕಸಭಾ ಕ್ಷೇತ್ರದ ಉಪಾಚುನಾವಣೆಯಲ್ಲಿ ಗೆಲುವು ಸಾಧಿಸಿದ ಪ್ರಿಯಾಂಕಾ ಗಾಂಧಿ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಹುಮತದತ್ತ ಇರುವ ಕಾಂಗ್ರೆಸ್ ಮೈತ್ರಿಕೂಟದ ಗೆಲುವಿನ ಸಂಭ್ರಮಾಚರಣೆಯು ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ನಡೆಯಿತು.

ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಸಿಹಿ ತಿನಿಸನ್ನು ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಕಾಂಚನ್ ಅವರು ಬಿಜೆಪಿಗರು ನಿರಂತರವಾಗಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿಕೊಂಡು ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸುವ ಪ್ರಯತ್ನದಲ್ಲಿ ನಿರತರಾಗಿರುವ ಬಿಜೆಪಿ ಜೆ.ಡಿ.ಎಸ್ ಮೈತ್ರಿಕೂಟಕ್ಕೆ ರಾಜ್ಯ ಜನರು ತಕ್ಕ ಉತ್ತರ ನೀಡಿದ್ದಾರೆ. ಕರ್ನಾಟಕ ರಾಜ್ಯದ ಇಬ್ಬರು ಮುಖ್ಯಮಂತ್ರಿಗಳ ಪುತ್ರರು ಹೀನಾಯವಾಗಿ ಸೋತಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿದ ಕರ್ನಾಟಕದ ಜನತೆಗೆ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಗ್ಯಾರೆಂಟಿಗಳನ್ನು ಜನರು ಮೆಚ್ಚುಗೆ ವ್ಯಕ್ತಪಡಿಸಿ ಮತ ನೀಡಿದ್ದಾರೆ. ಬಿಜೆಪಿಗರ ಕಾಂಗ್ರೆಸ್ ಮುಕ್ತ ಭಾರತ ಕನಸು ನುಚ್ಚು ನೂರಾಗಿದೆ. ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ಗೆದ್ದ ಪ್ರಿಯಾಂಕಾ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸಿ ಅವರು ಸಂಸದರಾಗಿ ಆಯ್ಕೆಯಾಗಿದ್ದರಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಸಂಚಲನ ಉಂಟಾಗಿದೆ ಎಂದು ಹೇಳಿದರು.

Advertisements

ಈ ಸಂದರ್ಭದಲ್ಲಿ ನಾಯಕರಾದ ಮಹಾಬಲ ಕುಂದರ್, ಪ್ರಖ್ಯಾತ್ ಶೆಟ್ಟಿ, ಗಣೇಶ್ ನೆರ್ಗಿ, ಸತೀಶ್ ಕುಮಾರ್ ಮಂಚಿ, ಹಮ್ಮದ್, ಪ್ರಶಾಂತ್ ಪೂಜಾರಿ, ನವೀನ್ ಶೆಟ್ಟಿ, ಡಾ. ಸುನಿತಾ ಶೆಟ್ಟಿ, ರೋಶ್ನಿ ಒಲಿವರ್, ಗೀತಾ ವಾಗ್ಲೆ, ಯತೀಶ್ ಕರ್ಕೇರ, ಲಕ್ಷ್ಮೀಕಾಂತ್ ಬೆಸ್ಕೂರು, ಶೇಖ್ ವಹೀದ್, ರೊನಾಲ್ಡ್ ಕರ್ಕಡ, ಕಮಲ್ ಸುವರ್ಣ, ಸಜ್ಜನ್ ಶೆಟ್ಟಿ, ಲಕ್ಷ್ಮಣ್ ಪೂಜಾರಿ, ಆನಂದ್ ಪೂಜಾರಿ ಕಿದಿಯೂರು, ಹಬೀಬ್ ಆಲಿ, ಪ್ರದೀಪ್ ಶೇರಿಗಾರ್, ಉದಯ್ ಪಂದುಬೆಟ್ಟು, ಭರತ್, ಸತೀಶ್ ಕೊಡವೂರು, ಸದಾನಂದ ಮೂಲ್ಯ, ವಿಲ್ಸನ್ ಸಿಕ್ವೇರ, ಸಂಧ್ಯಾ ತಿಲಕ್‌ರಾಜ್, ಸದಾನಂದ ಕಾಂಚನ್, ಶ್ರೀಧರ್ ಶೇಟ್, ಆನಂದ್ ಪೂಜಾರಿ, ಅಗ್ನೇಸ್ ಡೇಸಾ, ಗಿರೀಶ್ ಪೂಜಾರಿ, ಸೂರಜ್ ಕರ್ಕೇರ, ಅಬ್ಬೂಬಕ್ಕರ್, ಅಮೃತಾ ಪೂಜಾರಿ, ಐಡಾ ಡಿಸೋಜಾ, ಮತ್ತಕ್ ಆಲಿ, ನತಾಲಿಯ, ಸೀಮಾ, ರೋಷನ್ ಹಾಗೂ ಸಂಜಯ್ ಆಚಾರ್ಯ ಅವರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X