ಕೊನೆ ಗಳಿಗೆಯಲ್ಲಿ ಅಭ್ಯರ್ಥಿ ಆಯ್ಕೆ ಮಾಡಿದ್ದು ನಮ್ಮ ಸೋಲಿಗೆ ಕಾರಣ:‌ ಆರ್‌ ಅಶೋಕ್

Date:

Advertisements

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಜೊತೆಗೆ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ. ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯನ್ನು ತೀರ್ಮಾನಿಸಲಾಗಿತ್ತು. ಇದು ನಮಗೆ ನಕಾರಾತ್ಮಕವಾಗಿ ಪರಿಣಮಿಸಿದೆ. ಸಂಡೂರಿನಲ್ಲಿ ಉತ್ತಮ ಸ್ಪರ್ಧೆ ನೀಡಲಾಗಿದೆ” ಎಂದರು.

“ನಿಖಿಲ್‌ ಕುಮಾರಸ್ವಾಮಿ ಎರಡು ಬಾರಿ ಸೋತಿದ್ದಾರೆ ಎಂಬ ಅನುಕಂಪವಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ಇದು ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್‌ ಅವರ ಗೆಲುವಲ್ಲ. ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿದೆ. ಅಧಿಕಾರಿಗಳು, ಗುತ್ತಿಗೆದಾರರು ಸರ್ಕಾರದ ಪರವಾಗಿ ಕೆಲಸ ಮಾಡಿದ್ದಾರೆ. ಅಧಿಕಾರವಿದ್ದಾಗ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ಭಯದಿಂದ ಮತ ಹಾಕುತ್ತಾರೆ” ಎಂದರು.

Advertisements

“ಈ ಫಲಿತಾಂಶದ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುವುದು. ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಹಿಂಜರಿಯಬೇಕಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮರಳಿ ಪಕ್ಷ ಗೆಲ್ಲಲಿದೆ. ಕಾಂಗ್ರೆಸ್‌ನ ಪಾಪದ ಕೊಡ ಬಹುತೇಕ ತುಂಬಿದೆ. ಪೂರ್ತಿ ತುಂಬಿದ ಬಳಿಕ ಪಕ್ಷ ಅವನತಿಗೆ ಹೋಗಲಿದೆ. ಕಾಂಗ್ರೆಸ್‌ ಸರ್ಕಾರದ ಹಗರಣಗಳನ್ನು ಇನ್ನಷ್ಟು ಬಯಲಿಗೆಳೆಯುವ ಕೆಲಸವನ್ನು ಬಿಜೆಪಿ ಮಾಡಲಿದೆ” ಎಂದು ಹೇಳಿದರು.

“ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ದುರುಪಯೋಗ ಮಾಡಿಕೊಂಡು ಗೆದ್ದಿದೆ. ಇದು ಸಾಮಾನ್ಯವಾದ ಫಲಿತಾಂಶವಾಗಿದ್ದು, ಇದಕ್ಕಾಗಿ ಕಾಂಗ್ರೆಸ್‌ ಬೀಗಬೇಕಿಲ್ಲ. ಇದರಲ್ಲಿ ಚಮತ್ಕಾರವೇನೂ ಇಲ್ಲ. ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಯಶಸ್ಸು ದೊರೆತಿದೆ. ಜಾರ್ಖಂಡ್‌ನಲ್ಲಿ ಮತ ಗಳಿಕೆ ಕಡಿಮೆಯಾಗಿದೆ. ಒಟ್ಟಾರೆಯಾಗಿ ಜನರ ಅಭಿಪ್ರಾಯವನ್ನು ಗೌರವಿಸುತ್ತೇವೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಮುಸ್ಲಿಮರಿಗೆ ಮೀಸಲಾತಿ ಕೊಡುವ ಬಗ್ಗೆ ಹೇಳಿತ್ತು. ಆದರೆ ಜನರು ಅವರನ್ನು ತಿರಸ್ಕರಿಸಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X