ವಯನಾಡ್ | ರಾಹುಲ್ ದಾಖಲೆ ಮುರಿದ ಪ್ರಿಯಾಂಕಾ; 4.10 ಲಕ್ಷ ಮತಗಳ ಅಂತರದ ಭರ್ಜರಿ ಗೆಲುವು

Date:

Advertisements

ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು 6.22 ಲಕ್ಷ ಮತಗಳನ್ನು ಪಡೆದಿದ್ದು, ಬರೋಬ್ಬರಿ 4.10 ಲಕ್ಷ ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ. ಈ ಮೂಲಕ ತಮ್ಮ ಸಹೋದರ ರಾಹುಲ್‌ ಗಾಂಧಿ ಅವರ ದಾಖಲೆಯನ್ನೂ ಮುರಿದಿದ್ದಾರೆ. ಅಲ್ಲದೆ, ಮೊದಲ ಬಾರಿಗೆ ಸಂಸದೆಯಾಗಿ ಲೋಕಸಭೆ ಪ್ರವೇಶಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ವಯನಾಡ್‌ ಮತ್ತು ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ, ಎರಡೂ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿದ್ದರು. ಬಳಿಕ, ರಾಯ್‌ಬರೇಲಿಯನ್ನು ಉಳಿಸಿಕೊಂಡು, ವಯನಾಡ್‌ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ವಯನಾಡ್‌ ಸ್ಥಾನಕ್ಕೆ ನವೆಂಬರ್ 13ರಂದು ಮತದಾನ ನಡೆದಿತ್ತು. ಇಂದು (ಶನಿವಾರ) ಫಲಿತಾಂಶ ಪ್ರಕಟವಾಗಿದೆ.

ವಯನಾಡ್‌ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿತ್ತು. ಪ್ರಿಯಾಂಕಾ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮೊದಲ ಸ್ಪರ್ಧೆಯಲ್ಲೇ ಭರ್ಜರಿ ಗೆಲುವು ಕಂಡಿದ್ದಾರೆ.

Advertisements

ಪ್ರಿಯಾಂಕಾ ಅವರು ಒಟ್ಟು 6,22,338 ಮತಗಳನ್ನು ಗಳಿಸಿದ್ದಾರೆ. ಕ್ಷೇತ್ರದಲ್ಲಿ ಪ್ರಿಯಾಂಕಾ ಅವರ ಪ್ರತಿಸ್ಪರ್ಧಿಯಾಗಿ ಸ್ಪರ್ಧಿಸಿದ್ದ ಸಿಪಿಐನ ಸತ್ಯನ್ ಮೊಕೆರಿ ಅವರು 2,11,401 ಮತಗಳನ್ನು ಪಡೆದಿದ್ದಾರೆ. ಇನ್ನು, ಬಿಜೆಪಿ ಅಭ್ಯರ್ಥಿ ನವ್ಯ ಹರಿದಾಸ್ ಅವರು 1,09,939 ಮತಗಳನ್ನು ಪಡೆದಿದ್ದಾರೆ. ಪ್ರತಿಸ್ಪರ್ಧಿಗಳ ವಿರುದ್ಧ ಪ್ರಿಯಾಂಕಾ ಬರೋಬ್ಬರಿ 4,10,931 ಮತಗಳ ಅಂತರದಲ್ಲಿ ಗೆದಿದ್ದಾರೆ.

ಈ ಹಿಂದೆ, ವಯನಾಡ್‌ನಲ್ಲಿ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ 3.5 ಲಕ್ಷ ಮತಗಳ ಅಂತರದಿಂದ ಗೆದ್ದು, ಭಾರೀ ಅಂತರದ ಗೆಲುವು ಸಾಧಿಸಿದ್ದರು. ಇದೀಗ, ಪ್ರಿಯಾಂಕಾ ಅವರು ರಾಹುಲ್ ಅವರ ದಾಖಲೆಯ ಅಂತರವನ್ನು ಹಿಂದಿಕ್ಕಿ, 4.10 ಲಕ್ಷ ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

ವಯನಾಡಿನಲ್ಲಿ ಒಟ್ಟು 14 ಲಕ್ಷಕ್ಕೂ ಹೆಚ್ಚು ನೋಂದಾಯಿತ ಮತದಾರರಿದ್ದಾರೆ. ಆದರೆ, 64.72% ರಷ್ಟು ಮತದಾರರು ಮತದಾನ ಮಾಡಿದ್ದರು. ಚಲಾವಣೆಯಾದ ಮತಗಳಲ್ಲಿ ಪ್ರಿಯಾಂಕಾ ಅವರು ಅತ್ಯಧಿಕ ಮತಗಳನ್ನು ಗಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X