ನಗರದಲ್ಲಿ ಸರ್ಕಾರಿ ನೌಕರರ ಭವನ ಹಾಗೂ ಗುರುಭವನ ನಿರ್ಮಿಸಲು ಬದ್ಧನಾಗಿದ್ದು, ಅದು ನನ್ನ ಜವಾಬ್ದಾರಿ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಭರವಸೆ ನೀಡಿದರು.
ಕೋಲಾರ ನಗರ ಹೊರವಲಯದ ಶಾಸಕರ ಅತಿಥಿ ಗೃಹದಲ್ಲಿ ಶುಕ್ರವಾರ ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಹೊಸದಾಗಿ ಆಯ್ಕೆಯಾಗಿರುವ ನೂತನ ನಿರ್ದೇಶಕರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೋಲಾರಕ್ಕೆ ವೈದ್ಯಕೀಯ ಕಾಲೇಜು ಸಿಕ್ಕಿದ್ದು, ಅದನ್ನು ಉತ್ತಮವಾಗಿ ಹಾಗೂ ಸೂಕ್ತ ಸ್ಥಳದಲ್ಲಿ ನಿರ್ಮಿಸಬೇಕೆಂಬುದು ನನ್ನ ಗುರಿ. ಈ ನಿಟ್ಟಿನಲ್ಲಿ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆ ಸ್ಥಳ ಕೂಡ ಪರಿಶೀಲನೆಯಲ್ಲಿದೆ ಎಂದರು.
ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆಯಿದ್ದು ಉಳಿದ ಸಿಬ್ಬಂದಿ ಮೇಲೆ ಒತ್ತಡ ಉಂಟಾಗುತ್ತಿರುವುದು ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಸಿಬ್ಬಂದಿ ಭರ್ತಿಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಸಂಘಕ್ಕೆ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ನಿರ್ದೇಶಕರು, ತಾಲ್ಲೂಕು ಅಧ್ಯಕ್ಷರಿಗೆ ಅಭಿನಂದನೆಗಳು. ಪರಸ್ಪರ ಸಹಕಾರದಿಂದ ತಾಲ್ಲೂಕು ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು. ನಾನು ರೋಲ್ ಕಾಲ್ ಗಿರಾಕಿ ಅಲ್ಲ. ಅಧಿಕಾರಿಗಳು ಸೇರಿದಂತೆ ಯಾರಿಗೂ ಫೋನ್ ಮಾಡಿ ಕಾಟ ಕೊಡಲ್ಲ. ಸೇಡು ತೀರಿಸಿಕೊಳ್ಳುವ ವ್ಯಕ್ತಿಯೂ ಅಲ್ಲ. ನೌಕರರ ಸಹಾಯಕ್ಕೆ ನಾನು ಸದಾ ಬದ್ಧ. ಆದರೆ, ಕೆಲಸ ಸರಿಯಾಗಿ ನಡೆಯಬೇಕು. ಸಾರ್ವಜನಿಕರಿಗೆ ರೈತರಿಗೆ ತೊಂದರೆ ಆಗದಂತೆ ಕೆಲಸ ಮಾಡಬೇಕು. ಸರ್ಕಾರದ ಯೋಜನೆಗಳು ಜನರಿಗೆ ತಲುಪಿಸಬೇಕು ಎಂದು ಹೇಳಿದರು.
ರಾಜ್ಯಮಟ್ಟದಲ್ಲಿ ಜಿಲ್ಲೆಯ ನೌಕರರು ಉತ್ತಮ ಹೆಸರು ಮಾಡಬೇಕು. ಯಾರೇ ಆಯ್ಕೆಯಾದರೂ ಜಿಲ್ಲೆಯ ನೌಕರರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.
ಇದನ್ನೂ ಓದಿ: ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?
ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಈಗ ಗೆದ್ದು ನಿರ್ದೇಶಕರಾಗಿ ಆಯ್ಕೆಯಾದವರು ತಮ್ಮ ಇಲಾಖೆಯಲ್ಲಿನ ಸರ್ಕಾರಿ ನೌಕರರ ಪ್ರತಿನಿಧಿಗಳು. ಸರ್ಕಾರಿ ನೌಕರರ ಧ್ವನಿಯಾಗಿ ಕೆಲಸ ಮಾಡಬೇಕು. ತಮ್ಮ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ. ವ್ಯವಸ್ಥೆಯಲ್ಲಿನ ಕಲುಷಿತ ವಾತಾವರಣವನ್ನು ತಾವೆಲ್ಲಾ ಸೇರಿ ಶುದ್ಧ ಮಾಡಬೇಕು. ಇದು ನಿಮ್ಮೆಲರ ಮೇಲಿರುವ ಜವಾಬ್ದಾರಿ ಎಂದರು.
ಸಮಾರಂಭದಲ್ಲಿ ಸಂಘಕ್ಕೆ ಹೊಸದಾಗಿ ಆಯ್ಕೆಯಾಗಿರುವ ಮಾಜಿ ಅಧ್ಯಕ್ಷ ಕೆ.ಎನ್.ಮಂಜುನಾಥ್, ಕಂದಾಯ ಇಲಾಖೆ ಎಫ್‌ಡಿಎ ಅಜಯಕುಮಾರ್, ಎನ್.ಶ್ರೀನಿವಾಸ್, ತಬ್ಸುಮ್, ನಾಗವೇಣಿ, ಮಂಜುಳಾ, ನೀಲಮ್ಮ, ನಂದಿನಿ ಎಚ್.ಎ., ಸೌಮ್ಯಾ, ಮಂಜುನಾಥ್, ಮಂಜುನಾಥ್ ಕೆ., ಶ್ರೀನಿವಾಸಮೂರ್ತಿ, ಹೇಮಂತಕುಮಾರ್, ಅನಿಲ್‌ಕುಮಾರ್, ಶಿವಪ್ರಕಾಶ್, ಕೇಶವರೆಡ್ಡಿ, ನಾರಾಯಣಸ್ವಾಮಿ, ಸೋಮಶೇಖರ್ ಆರ್, ರಾಮಮೂರ್ತಿ, ವೆಂಕಟೇಶ, ಚೌಡಪ್ಪ, ಡಾ.ಪ್ರಶಾಂತ್, ವೆಂಕಟೇಶ್ ಬಾಬು, ಮುರಳಿ ಮೋಹನ್, ರತ್ನಪ್ಪ, ಮೊಹಮ್ಕದ್ ಹಿದಾಯತುಲ್ಲಾ, ಮಧು, ಪುರುಷೋತ್ತಮ, ಸುಬ್ರಮಣಿ, ಕೆ.ಕಿರಣ್ ಕುಮಾರ್, ಕೆ.ಶ್ರೀನಿವಾಸ್ , ಮಂಜೇಶ್, ಮಂಜುನಾಥ್, ಸುಬ್ರಮಣ್ಯ, ಯದುನಂದನ್, ರಾಘವೇಂದ್ರ, ಸತೀಶ್ ಕುಮಾರ್, ಬಂಗಾರಪೇಟೆಯ ಅಪ್ಪೇಗೌಡ, ಅಜಯ್, ಪ್ರಭುಕರ್ ರೆಡ್ಡಿ, ಕೆ.ಟಿ.ನಾಗರಾಜ್, ಪ್ರೇಮಾ ಮುಂತಾದವರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ : ಕೋಲಾರ | ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪದಬಳಕೆ; ಕಾಂಗ್ರೆಸ್ ದೂರು
ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಜಂಜಿಮಲೆ ರಮೇಶ್, ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮಾಲೂರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮುನೇಗೌಡ, ಮುಳಬಾಗಿಲು ಅಧ್ಯಕ್ಷ ಅರವಿಂದ್, ಕಂದಾಯ ನೌಕರರ ಸಂಘದ ಅಧ್ಯಕ್ಷ ರಾಜೇಂದ್ರ ಕುಮಾರ್ ಜಿಲ್ಲಾ ಚಾಲಕರ ನೌಕರರ ಸಂಘದ ಅಧ್ಯಕ್ಷ ಮಾರುತಿ ಕುಮಾರ್ ಮುಂತಾದವರು ಹಾಜರಿದ್ದರು.