ಬೀದರ್ | ರಾಜ್ಯ ಕಾಂಗ್ರೆಸ್ ಸರ್ಕಾರದ ಉತ್ತಮ ಆಡಳಿತಕ್ಕೆ ಸಂದ ಜಯ : ಸಚಿವ ಈಶ್ವರ ಖಂಡ್ರೆ

Date:

Advertisements

ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದ ಜನತೆ ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

ಬಸವಕಲ್ಯಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ‘ಹಳೆ ಮೈಸೂರು, ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ನಡೆದ ಈ ಉಪ ಚುನಾವಣೆಯಲ್ಲಿ ಅಭಿವೃದ್ಧಿಗೆ ಒಲವು, ಗ್ಯಾರಂಟಿಗಳಿಗೆ ಗೆಲುವು ನೀಡಿರುವ ಮತದಾರರಿಗೆ ಧನ್ಯವಾದ ಅರ್ಪಿಸಿದರು. ಶಿಗ್ಗಾವಿಯಲ್ಲಿ ವಚನ ಭ್ರಷ್ಟರಿಗೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ಆ ಕ್ಷೇತ್ರದ ಉಸ್ತುವಾರಿಯಾಗಿದ್ದ ನಾನು ಮತದಾರರಿಗೆ ವಿಶೇಷವಾಗಿ ಧನ್ಯವಾದ ಅರ್ಪಿಸುವೆ’ ಎಂದರು.

ಕಾಂಗ್ರೆಸ್ ಪಕ್ಷದ ನಾಯಕರು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಮೂರೂ ಉಪ ಚುನಾವಣೆಗಳ ಗೆಲುವಿಗೆ ಹಗಲಿರುಳು ಶ್ರಮಿಸಿದ್ದಾರೆ. ಎಲ್ಲರ ಸಂಘಟಿತ ಪ್ರಯತ್ನಕ್ಕೆ ಈ ಗೆಲುವಿನ ಹಾರ ಸಂದಿದೆ. ಉತ್ತಮ ನಾಯಕತ್ವ ನೀಡಿ ಮಾರ್ಗದರ್ಶನ ಮಾಡಿದ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಲ್ಲ ಕಾಂಗ್ರೆಸ್ ಸಚಿವರು, ಶಾಸಕರಿಗೆ ಈ ಗೆಲುವಿಗೆ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದರು.

Advertisements

‘ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಉತ್ತಮ ಆಡಳಿತಕ್ಕೆ ಸಂದ ಜಯವಾಗಿದೆ. ಗ್ಯಾರಂಟಿಗಳ ಯಶಸ್ವಿ ಅನುಷ್ಠಾನ, ನಮ್ಮ ಜನಪರ ಕಾರ್ಯಕ್ರಮ ಮುಂದಿಟ್ಟು ಚುನಾವಣೆಗೆ ಹೋದೆವು, ಜನ ಬೆಂಬಲ ನೀಡಿದ್ದಾರೆ. ಈಗಲಾದರೂ ಪ್ರತಿಪಕ್ಷಗಳು ಎಚ್ಚೆತ್ತು, ರಾಜಕೀಯ ಮತ್ತು ಅಪಪ್ರಚಾರ ಬಿಟ್ಟು, ರಾಜ್ಯದ ಅಭಿವೃದ್ಧಿಗೆ ಸರ್ಕಾರದೊಂದಿಗೆ ಕೈಜೋಡಿಸಬೇಕು’ ಎಂದರು.

ಈ ಸುದ್ದಿ ಓದಿದ್ದೀರಾ? ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಅಲ್ಲಿನ ಮತದಾರರು ಒಲವು ತೋರಿದ್ದಾರೆ. ಆದರೆ ಮಹಾರಾಷ್ಟ್ರದ ಫಲಿತಾಂಶ ಅನಿರೀಕ್ಷಿತ ಮತ್ತು ಆಘಾತಕಾರಿಯಾಗಿದೆ. ಬಿಜೆಪಿ ಮತ್ತು ಮಹಾಯುತಿ ಹಣದ ಹೊಳೆಯನ್ನೇ ಹರಿಸಿತು, ಅಧಿಕಾರದ ದುರ್ಬಳಕೆ ಮಾಡಿಕೊಂಡು ಈ ಚುನಾವಣೆ ಗೆದ್ದಿದೆ’ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X