ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಯುತ್ತಿದ್ದು, ಹಿಂದು ಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗುತ್ತಿದೆ. ಪರಿಣಾಮ, ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನವೆಂಬರ್ 25ರಿಂದ ತಮಿಳುನಾಡು, ಆಂಧ್ರಪ್ರದೇಶ, ಅಂಡಮಾನ್, ನಿಕೋಬಾರ್ನಲ್ಲಿ ಭಾರೀ ಮಳೆಯಾಗಲಿದೆ. ನವೆಂಬರ್ 27ರಿಂದ ಕರ್ನಾಟಕ ಮತ್ತು ಕೇರಳದಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕದ 10 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾದರೆ, 7 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಇಲಾಖೆ ಹೇಳಿದೆ.
ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶಗಳಾ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.