ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಖಾನಾಪೂರ ಐನಾಪೂರ ರಸ್ತೆ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿಗಳಿಬ್ಬರೂ ಮೃತಪಟ್ಟಿರುವ ಘಟನೆ ನಡೆದಿದೆ.
ಶನಿವಾರ ದಂಪತಿಗಳು ಕಾರಿನಲ್ಲಿ ಐನಾಪುರದ ಸಂಬಂಧಿಕರ ಮನೆ ಕಾರ್ಯಕ್ರಮಕ್ಕೆ ಬಂದು ಮರಳಿ ಮನೆಗೆ ಹೋಗುವ ಸಂದರ್ಭದಲ್ಲಿ ಮಂಗಸುಳಿ-ಐನಾಪುರ ರಸ್ತೆ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಆದರ್ಶ ಮತ್ತು ಶಿವಾನಿ ದಂಪತಿಗಳು ಮೃತಪಟ್ಟಿದ್ದು ಇನ್ನುಳಿದ ಐವರನ್ನು ಗಾಯಗೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾಗವಾಡ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.