ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024 ಪ್ರಯುಕ್ತ ತಾಲೂಕಿನಾದ್ಯಂತ ವಿಶೇಷ ಆಂದೋಲನ ಕಾರ್ಯಕ್ರಮ ನಡೆಯಲಿದೆ. ಈ ಪರಿಷ್ಕರಣೆ ಕಾರ್ಯದಲ್ಲಿ ಮತದಾರರ ಸಾಕ್ಷರತಾ ಸಂಘಗಳ ಪಾತ್ರ ಪ್ರಮುಖವಾದುದು ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ತಿಳಿಸಿದರು.
ಬಾಗೇಪಲ್ಲಿ ಪಟ್ಟಣದ ಬಾಲಕಿಯರ ಶಾಲೆ ಆವರಣದಲ್ಲಿ ಮತದಾರರ ಸಾಕ್ಷರತಾ ಸಂಘದ ವತಿಯಿಂದ ವಿವಿಧ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?
ಎಲ್ಲಾ ಸರಕಾರಿ ಹಾಗೂ ಖಾಸಗಿ ಅನುದಾನಿತ ಪ್ರೌಢಶಾಲೆ ಹಾಗೂ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಮತದಾರರ ಸಾಕ್ಷರತಾ ಸಂಘಗಳನ್ನು ಸ್ಥಾಪಿಸಿ ಎಲ್ಲಾ ವಿದ್ಯಾರ್ಥಿಗಳು ಸಂಘಕ್ಕೆ ನೋಂದಣಿಯಾಗಬೇಕು. ಈ ಸಂಘಗಳ ಸದಸ್ಯರು ಮತ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಪಾಲ್ಗೊಂಡು 1950ಕ್ಕೆ ಉಚಿತ ಸಂಖ್ಯೆಗೆ ಕರೆ ಮಾಡುವ ಮೂಲಕ ಮತಪಟ್ಟಿಯ ಮಾಹಿತಿ ಪಡೆಯುವ, ಹೊಸದಾಗಿ ಮತದಾರರ ಪಟ್ಟಿ ಸೇರ್ಪಡೆ ಹಾಗೂ ಮತದಾರರ ಪಟ್ಟಿ ಪರಿಶೀಲನೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
ಬಿಇಓ ಎನ್ ವೆಂಕಟೇಶಪ್ಪ ಮಾತನಾಡಿ, 18 ವರ್ಷ ತುಂಬಿದ ಅರ್ಹ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರಿಸಲು ಅವಕಾಶವಿದೆ. ಮತಪಟ್ಟಿ ಪರಿಶೀಲನೆಗಾಗಿ ಸಾರ್ವಜನಿಕರು ಆಯಾ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು. ಕಾಲೇಜು ವಿದ್ಯಾರ್ಥಿಗಳು ಪ್ರಥಮವಾಗಿ ತಾವು, ನಂತರ ತಮ್ಮ ಕುಟುಂಬ, ಸುತ್ತಮುತ್ತಲಿನ ಸಾರ್ವಜನಿಕರಿಗೆ ಮಾಹಿತಿ ನೀಡಿ ವಿಶೇಷ ಪರಿಷ್ಕರಣೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಇದನ್ನೂ ಓದಿ : ಚಿಕ್ಕಬಳ್ಳಾಪುರ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪುನರ್ವಸತಿ ಕಾರ್ಯಕರ್ತರ ಪ್ರತಿಭಟನೆ
ಈ ಸಂದರ್ಭದಲ್ಲಿ ಸರಕಾರಿ ಬಾಲಕೀಯರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೂಪ ಪೈ, ಬಾಲಕರ ಕಾಲೇಜಿನ ಪ್ರಾಂಶುಪಾಲ ನಂಜಿರೆಡ್ಡಿ, ಉಮಾಶಶಿ, ಉಪನ್ಯಾಸಕರಾದ ನಾಗರಾಜ್, ವೆಂಕಟರಾಮರೆಡ್ಡಿ, ಸಂಯೋಜಕರಾದ ಶಿವಪ್ಪ ಹಾಜರಿದ್ದರು.