ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾಗ ತಡೆಯದೆ ಮೊಬೈಲ್‌ನಲ್ಲಿ ವಿಡಿಯೊ ಮಾಡಿದ ಆರೋಪದಡಿ ಪತ್ನಿಯ ವಿರುದ್ಧ ಮಹಾರಾಷ್ಟ್ರದ ಠಾಣೆ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಾಗ್ಲೆಎಸ್ಟೇಟ್ ಪ್ರದೇಶದಲ್ಲಿ ವಾಸವಾಗಿರುವ ದಂಪತಿಗಳು ಸಣ್ಣಪುಟ್ಟ ವಿಚಾರಗಳಿಗೆ ಪದೇ ಪದೇ ಜಗಳವಾಡುತ್ತಿದ್ದರು. ನವೆಂಬರ್ 20ರಂದು ಈ ಘಟನೆ ನಡೆದಿದೆ. 29 ವರ್ಷ ವಯಸ್ಸಿನ ವ್ಯಕ್ತಿ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ನಡೆದಾಗ ಆತನ ಪತ್ನಿ ಅಲ್ಲಿಯೇ ಇದ್ದಳು. ಗಂಡ ನೇಣು ಹಾಕಿಕೊಳ್ಳುತ್ತಿದ್ದಾಗ ಪತ್ನಿ ಅದನ್ನು ತಡೆಯುವ ಬದಲು ಇಡೀ ಘಟನೆಯನ್ನು ಮೊಬೈಲ್‌ನಲ್ಲಿ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದರು ಎಂಬ ಆರೋಪ ಕೇಳಿ ಬಂದಿದೆ ಎಂದು ವರದಿಯಾಗಿದೆ.
ಈ ಸುದ್ದಿ ಓದಿದ್ದೀರಾ? ಲೋಕಸಭೆ ಸೋಲಿನ ಆರೇ ತಿಂಗಳಲ್ಲಿ ಮಹಾರಾಷ್ಟ್ರವನ್ನು ಬಿಜೆಪಿ ಗೆದ್ದಿದ್ದು ಹೇಗೆ?; 6 ಕಾರಣಗಳಿವು
ಈ ಕುರಿತು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ತಾಯಿ ನೀಡಿದ ದೂರಿನ ಅನ್ವಯ ಮಹಿಳೆಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಮತ್ತು ಈ ಕೃತ್ಯವನ್ನು ವಿಡಿಯೊ ಮಾಡಿಕೊಂಡಿದ್ದಕ್ಕಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.