ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ನಟಿಸುತ್ತಿರುವ ಜ್ಯೂನಿಯರ್ ಕಲಾವಿದರನ್ನು ಕೊಲ್ಲೂರು ಕಡೆಗೆ ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ 6 ಮಂದಿ ಗಂಭೀರ ಗೊಂಡು ಹಲವು ಮಂದಿ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ಇಂದು ಭಾನುವಾರ ರಾತ್ರಿ ವೇಳೆ ನಡೆದಿದೆ.
ಮುದೂರಿನಲ್ಲಿ ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ಮುಗಿಸಿ ಇಪ್ಪತ್ತು ಜ್ಯೂನಿಯರ್ ಕಲಾವಿದರನ್ನು ಕೊಲ್ಲೂರಿಗೆ ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿದ್ದು, ಇದರಿಂದ ಆರು ಮಂದಿ ತೀವ್ರ ಗಾಯಗೊಂಡಿದ್ದಾರೆ. ಇವರೆಲ್ಲ ಜಡ್ಕಲ್ ಮತ್ತು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
