ಶ್ರೀರಂಗಪಟ್ಟಣ | ಸನ್ಮಾನವಷ್ಟೇ ಸಾಲದು, ವಿದ್ಯಾರ್ಥಿಗಳ ಓದಿಗೂ ನೆರವಾಗಿ : ಆಶಾಲತಾ ಪುಟ್ಟೇಗೌಡ

Date:

Advertisements

ರಾಜ್ಯೋತ್ಸವದ ದಿನ ಓದುವ ಮಕ್ಕಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರೆ ಸಾಲುವುದಿಲ್ಲ, ಅವರ ಮುಂದಿನ ಓದಿಗೆ ಸಂಘ ಸಂಸ್ಥೆಗಳು ನೆರವಾಗಬೇಕು ಎಂದು ಶ್ರೀರಂಗಪಟ್ಟಣದ ಶ್ರೀರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೆಗೌಡ ಕರೆ ನೀಡಿದರು.

ಶ್ರೀರಂಗಪಟ್ಟಣದ ಹನುಮಂತನಗರದಲ್ಲಿ ಸುಭಾಷ್ ಚಂದ್ರ ಬೋಸ್ ಯುವಕರ ಸಂಘದ ವತಿಯಿಂದ ಮಂಗಳವಾರ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಪಠ್ಯ ಪುಸ್ತಕಗಳನ್ನು ಮಾತ್ರ ಕೊಡುತ್ತಾರೆ. ಬರೆಯುವ ಪುಸ್ತಕಗಳನ್ನು ಕೊಡುವುದಿಲ್ಲ. ಪ್ರತಿಭಾವಂತ ಬಡ ಮಕ್ಕಳಿಗೆ ಪುಸ್ತಕ ಕೊಂಡುಕೊಳ್ಳುವುದು ಕಷ್ಟ. ಅಂತಹ ಮಕ್ಕಳಿಗೆ ನಮ್ಮ ಸ್ತ್ರೀ ಸಮಾಜದ ವತಿಯಿಂದ ಸಹಾಯ ಮಾಡುತಿದ್ದೇವೆ. ಇದರ ಸದುಪಯೋಗಪಡಿಸಿಕೊಳ್ಳಿ ಎಂದರು.

Advertisements
IMG 20241124 WA0058

ಉಪನ್ಯಾಸಕಿ ಡಾ.ಸಿ.ಕೆ.ಮಮತಾ ಮಾತನಾಡಿ, ಮಂಡ್ಯದಲ್ಲಿ 87ನೇ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ‌. ಇದರಲ್ಲಿ ಪ್ರಪಂಚದ ಎಲ್ಲಾ ಕಡೆಯ ಕನ್ನಡ ಸಾಧಕರು ಭಾಗವಹಿಸುತ್ತಿದ್ದಾರೆ. ಇದು ಕನ್ನಡದ ದೊಡ್ಡ ಇತಿಹಾಸವನ್ನು ಸಾರುವಂತಹ ಕಾರ್ಯಕ್ರಮ. ಇಂತಹ ಸುಸಂದರ್ಭದಲ್ಲಿ ಉತ್ತಮ ಸಂಘಟಿತ ಸುಭಾಷ್ ಚಂದ್ರ ಬೋಸ್ ಸಂಘವು ಹತ್ತನೇ ವಾರ್ಷಿಕೋತ್ಸವ ಮತ್ತು 69ನೇ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸುತ್ತಿರುವುದು ಖುಷಿಯ ಸಂಗತಿ. ಸಂಘದ ಸಮಾಜಮುಖಿ ಕಾರ್ಯಕ್ರಮಗಳು ಹೀಗೇ ಮುಂದುವರಿಯಲಿ ಎಂದು ಆಶಿಸಿದರು.

ಕಡತನಾಳು ಸಮರ್ಪಣಾ ಟ್ರಸ್ಟಿನ ಅಧ್ಯಕ್ಷ ಕೆ ಎಸ್ ಜಯಶಂಕರ್ ಮಾತನಾಡಿ, ಕುವೆಂಪು ಹೇಳುವಂತೆ ಸರ್ವ ಜನಾಂಗದ ಶಾಂತಿಯ ತೋಟ ಈ ನಮ್ಮ ಶ್ರೀರಂಗಪಟ್ಟಣದ ಹನುಮಂತನಗರ ಗ್ರಾಮ. ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳು ಮತ್ತು ಮಕ್ಕಳು ಸೇರಿ ಕನ್ನಡ ರಾಜ್ಯೋತ್ಸವ ಆಚರಣೆ ಬಹಳ ಖುಷಿ ಕೊಡುತ್ತಿದೆ ಎಂದರು.

ಸುಭಾಷ್ ಚಂದ್ರ ಬೋಸ್ ಸಂಘದ ವತಿಯಿಂದ ಸತತವಾಗಿ 10 ವರ್ಷಗಳಿಂದ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿರುವುದು ನಿಜಕ್ಕೂ ಶ್ಲಾಘನೀಯ. ಈ ಸಂಘದಿಂದ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ, ಆರೋಗ್ಯ ತಪಾಸಣಾ ಶಿಬಿರಗಳು ಮುಂತಾದ ಅರಿವು ಕಾರ್ಯಗಾರಗಳು ನಡೆಯುತ್ತಿರುವುದು ಖುಷಿಯ ವಿಚಾರ ಎಂದು ಹುರಿದುಂಬಿಸಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

ಕಾರ್ಯಕ್ರಮದಲ್ಲಿ ಸವಿತಾ ಜಗದೀಶ್, ಗ್ರಾಮ ಪಂಚಾಯತಿ ಸದಸ್ಯರಾದ ಜವರೇಗೌಡ, ಪ್ರೀತಿ ಜನಾರ್ಧನ್, ಚೌಡಮ್ಮ, ಅನಿತಾ, ಸಂಘದ ಪದಾಧಿಕಾರಿಗಳಾದ ಬೈರೇಶ್, ವೆಂಕಟೇಶ್, ಚೇತನ್, ಹರೀಶ್, ವಕೀಲ ಹರೀಶ್, ಸದಸ್ಯರಾದ ಶೌಕತ್, ಮಹೇಶ್, ಆನಂದ್, ಲೋಕೇಶ್, ವಿನೋದ್ ಕುಮಾರ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X