ನಮ್ಮ ಅವಧಿಯಲ್ಲಿ ವಕ್ಫ್ ನೋಟಿಸ್ ಕೊಟ್ಟವರ ವಿರುದ್ಧವೂ ಕ್ರಮವಾಗಲಿ: ಆರ್ ಅಶೋಕ್

Date:

Advertisements

ನಮ್ಮ ಅವಧಿಯಲ್ಲಿ ರೈತರಿಗೆ ನೋಟಿಸ್ ಕೊಟ್ಟಿದ್ದ ಅಧಿಕಾರಿಗಳ ವಿರುದ್ಧವೂ ಕ್ರಮವಾಗಲಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಹೆಚ್ಚು ವಕ್ಫ್ ನೋಟಿಸ್ ಕೊಟ್ಟಿದ್ದ ವಿಚಾರವಾಗಿ, ನಮ್ಮ ಸರ್ಕಾರದ ಅವಧಿಯಲ್ಲಿ ಅನ್ವರ್‌ ಮಾಣಿಪ್ಪಾಡಿ ವರದಿಯನ್ನು ಆಧರಿಸಿ ನಾವು ನೋಟಿಸ್ ಕೊಟ್ಟಿದ್ದೆವು. ಈ ವರದಿಯಲ್ಲಿ ಬಹಳಷ್ಟು ಕಾಂಗ್ರೆಸ್‌ನ ದೊಡ್ಡ ದೊಡ್ಡ ನಾಯಕರು, ಕೇಂದ್ರ, ರಾಜ್ಯಗಳ ನಾಯಕರು ವಕ್ಫ್ ಭೂಮಿ ಒತ್ತುವರಿ ಮಾಡಿಕೊಂಡು ಮಾರಾಟ ಮಾಡಿಕೊಂಡಿದ್ದರು. ಇಂಥವರಿಗೆ ನಾವು ನೋಟಿಸ್ ಕೊಟ್ಟಿರಬಹುದು. ಕಾಂಗ್ರೆಸ್‌ನವರು ವಕ್ಫ್ ಬೋರ್ಡ್‌ನಲ್ಲಿ ಅಕ್ರಮವಾಗಿದೆ ಎಂದು ಒಪ್ಪಿಕೊಳ್ಳಲು ತಯಾರಿಲ್ಲ ಎಂದರು.

ನಮ್ಮ ಅವಧಿಯಲ್ಲಿ ತಪ್ಪಾಗಿದ್ದರೂ ಕ್ರಮವಾಗಲಿ. ಕಾಂಗ್ರೆಸ್ ಅವಧಿಯಲ್ಲಿ ತಪ್ಪಾಗಿದ್ದರೂ ಕ್ರಮವಾಗಲಿ. ನಾವೇನು ಅಧಿಕಾರಿಗಳ ರಕ್ಷಣೆ ಮಾಡುತ್ತಿಲ್ಲ. ನಮ್ಮ ಅವಧಿಯಲ್ಲಿ ಅಥವಾ ಕಾಂಗ್ರೆಸ್ ಅವಧಿಯಲ್ಲಿ ಅಧಿಕಾರಿಗಳು ತಪ್ಪಾಗಿ ವಕ್ಫ್ ನೋಟಿಸ್ ಕೊಟ್ಟಿದ್ದರೆ ಕ್ರಮವಾಗಲಿ. ಕಾಂಗ್ರೆಸ್ ಅವಧಿಯಲ್ಲಿ ರೈತರಿಗೆ ನೋಟಿಸ್ ಕೊಡುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಮಾಣಿಪ್ಪಾಡಿ ವರದಿಯಲ್ಲಿ ಕಾಂಗ್ರೆಸ್ ನಾಯಕರು ಒತ್ತುವರಿ ಮಾಡಿಕೊಂಡಿದ್ದರು. ಅದಕ್ಕೆ ನೋಟಿಸ್ ಕೊಟ್ಟಿದ್ದೇವೆ. ನಮ್ಮ ಕಾಲದಲ್ಲಿ ರೈತರಿಗೆ ನೋಟಿಸ್ ಕೊಟ್ಟಿದ್ದರೆ ಅದೂ ತಪ್ಪು ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

ಮುಡಾ ಕಚೇರಿಯಿಂದ ಐಎಎಸ್ ಅಧಿಕಾರಿ 144 ಫೈಲುಗಳನ್ನು ತೆಗೆದುಕೊಂಡು ಹೋಗಿರುವ ವಿಚಾರವಾಗಿ ಮಾತನಾಡಿದ ಅಶೋಕ್, ಈ ವಿಚಾರ ನಮಗೆ ದಿಗ್ಭ್ರಮೆ ಮೂಡಿಸಿದೆ. ಭೈರತಿ ಸುರೇಶ್ ಅವರು ಎಷ್ಟು ಫೈಲ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ ಗೊತ್ತಿಲ್ಲ. ಅದಕ್ಕೂ ಮುಂಚೆ ಐಎಎಸ್ ಅಧಿಕಾರಿಯೊಬ್ಬರು ಮುಡಾ ಫೈಲ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆಂದರೆ ರಾಜ್ಯದಲ್ಲಿ ಆಡಳಿತ ಯಾವ ಮಟ್ಟಕ್ಕೆ ಬಂದಿದೆ? ಅಧಿಕಾರಿಗಳೇ ಮುಡಾ ಅಕ್ರಮದಲ್ಲಿ ರಕ್ಷಣೆಗೆ ಮುಂದಾಗಿರುವುದು ಸರಿಯಲ್ಲ. ಈ ಪ್ರಕರಣ ಸಿಬಿಐಗೆ ತನಿಖೆಗೆ ಕೊಡಬೇಕು ಎಂದು ಆಗ್ರಹಿಸುತ್ತೇನೆ ಎಂದರು.

ಮುಡಾ ಅಕ್ರಮ ಈ ರಾಜ್ಯ ಕಂಡ ದೊಡ್ಡ ಹಗರಣ. ಸಿಎಂ, ಮತ್ತವರ ಕುಟುಂಬ ಶಾಮೀಲಾಗಿದ್ದಾರೆ. 14 ಸೈಟುಗಳಷ್ಟೇ ಅಲ್ಲ ಬಡವರ ಸೈಟುಗಳನ್ನು ಕೂಡ ಲೂಟಿ ಮಾಡಲಾಗಿದೆ. ಮುಡಾದಲ್ಲಿ 3-4 ಸಾವಿರ ಕೋಟಿ ರೂ. ಅಕ್ರಮವಾಗಿದೆ. ಐಎಎಸ್ ಅಧಿಕಾರಿಗಳು ಮಾಡಿರುವ ತಪ್ಪನ್ನು ಸರಿಪಡಿಸಲು ದಾಖಲೆ ತಿದ್ದಿರುತ್ತಾರೆ. ವೈಟ್ನರ್ ಹಾಕಿ, ದಾಖಲೆಗಳನ್ನು ಮಾಯ ಮಾಡಿರುತ್ತಾರೆ. ಇದನ್ನು ಸಿಬಿಐ ತನಿಖೆಗೆ ಒಳಪಡಿಸಿದರೆ ಆದರೆ ಇನ್ನಷ್ಟು ಹಗರಣಗಳು ಹೊರಗೆ ಬರುತ್ತದೆ ಎಂದು ತಿಳಿಸಿದರು.

ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಆರ್‌ ಅಶೋಕ್, ಫಲಿತಾಂಶದಿಂದ ನಮ್ಮ ಮೇಲೆ, ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಹಿಂದೆ ನಮ್ಮ ಸರ್ಕಾರ ಇದ್ದಾಗ 18 ಉಪ ಚುನಾವಣೆ ಗೆದ್ದಿದ್ದೆವು. ನಂತರ ಸಾರ್ವತ್ರಿಕ ಚುನಾವಣೆ ಸೋತಿದ್ದೆವು. ಈ ಫಲಿತಾಂಶ ಕಾಂಗ್ರೆಸ್ ಅಕ್ರಮಗಳಿಗೆ ಕ್ಲೀನ್‌ಚಿಟ್ ಅಲ್ಲ. ಅದೇ ಬೇರೆ, ಇದೇ ಬೇರೆ. ಉಪಚುನಾವಣೆ ಸ್ಥಳೀಯ ವಿಚಾರಗಳ ಮೇಲೆ ನಡೆದಿದೆ. ಇದು ರಾಜ್ಯದ ತೀರ್ಪಲ್ಲ. ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿಲ್ಲಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಸ್ಲಿಂ ಮತಗಳು ಬಾರದೇ ಸೋಲಾಯ್ತು ಎಂಬ ನಿಖಿಲ್ ಹೇಳಿಕೆ ವಿಚಾರವಾಗಿ ಮಾತನಾಡಿದ ವಿಪಕ್ಷ ನಾಯಕ, ನಿಖಿಲ್ ಸತ್ಯವನ್ನೇ ಹೇಳಿದ್ದಾರೆ. ಬೂತ್‌ಗಳಲ್ಲಿ ಬೆರಳೆಣಿಕೆಯಷ್ಟು ಮುಸ್ಲಿಂ ಮತಗಳು ಜೆಡಿಎಸ್‌ಗೆ ಬಂದಿದೆ. ಆ ಸಮುದಾಯ ನಿಖಿಲ್‌ನನ್ನು ಸೋಲಿಸಲು ಮತ ಹಾಕಿಲ್ಲ. ಉಳಿದ ಸಮುದಾಯಗಳೂ ಒಟ್ಟಾಗಿ ಮತ ಚಲಾಯಿಸಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಒಟ್ಟಾಗಿ ಆಗಲಿಲ್ಲ. ಇಲ್ಲಿ ಮುಸ್ಲಿಂ ಸಮುದಾಯ ಒಟ್ಟಾದಂತೆ ಉಳಿದ ಸಮುದಾಯ ಒಟ್ಟಾಗಲಿಲ್ಲ. ಮುಸ್ಲಿಂ ಸಮುದಾಯದ ತರ ಉಳಿದ ಸಮುದಾಯಗಳು ಕೂಡ ನಿಖಿಲ್ ಪರ ಒಟ್ಟಾಗಿ ನಿಲ್ಲಬೇಕಿತ್ತು ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X