ಬಾಗಲಕೋಟೆ | ದೇಶದ ಬೆನ್ನುಲುಬು ರೈತನ ಪರಿಸ್ಥಿತಿ ಸಂಕಷ್ಟದಲ್ಲಿದೆ: ಡಾ. ರವೀಂದ್ರ ಬೆಳ್ಳಿ

Date:

Advertisements

ದೇಶದ ಬೆನ್ನೆಲುಬು ರೈತ ಮತ್ತು ಸೈನಿಕರನ್ನು ನಾವೆಲ್ಲ ನೆನೆಯಬೇಕಾದ ಇಂದಿನ ಸಂದರ್ಭದಲ್ಲಿ ಅವಮಾನ ಪರಿಸ್ಥಿತಿಯಿಂದಾಗಿ ರೈತನ ಬಾಳು ಸಂಕಷ್ಟದಲ್ಲಿದೆ. ಆತನಿಗೆ ಬ್ಯಾಂಕುಗಳು ಸಕಾಲದಲ್ಲಿ ಸಾಲ ಸೌಲಭ್ಯ ನೀಡಿ ಬೆಂಬಲಿಸಬೇಕಾಗಿದೆ ಎಂದು ಬಿಜಾಪುರ್ ಕೃಷಿ ಮಹಾವಿದ್ಯಾಲಯ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಮಹಾಲಿಂಗಪುರದ ರೋಹಿಣಿ ಸಂಸ್ಥೆಯ ಬೋಧಿ ವೃಕ್ಷ ಸವಾಂಗಣದಲ್ಲಿ ಬ್ಯಾಂಕ್ ಆಫ್ ಬರೋಡ ವತಿಯಿಂದ ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ, ರೋಹಿಣಿ ಬಯೋಟೆಕ್ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಲಾದ ಕೃಷಿ ಪರವಾದ ಬೃಹತ್ ರೈತ ಮೇಳದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರು ಸುಸ್ಥಿರ, ಸಾವಯವ, ಸಮಗ್ರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡ ಸ್ವಾಲಂಬಿ ಬದುಕು ರೂಪಿಸಿಕೊಳ್ಳಬೇಕು. ಇಂದು ರೈತರು ಅಗತ್ಯಕ್ಕಿಂತ ಹೆಚ್ಚಿಗೆ ನೀರು, ರಾಸಾಯನಿಕ ಗೊಬ್ಬರ, ಕೀಟನಾಶಕಗಳ ಬಳಕೆಯಿಂದಾಗಿ, ಬೆಳೆಯುವ ಆಹಾರ ವಿಷವಾಗಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಕಾರಣ ರೈತರು ಮಣ್ಣು ಮತ್ತು ನೀರನ್ನು ಸಂರಕ್ಷಿಸಬೇಕು ಬೆಳೆಗಳಿಗೆ ಸಾವಯವ ಗೊಬ್ಬರಗಳ ಬೆಳಕೆಯನ್ನು ಹೆಚ್ಚಿಗೆ ಮಾಡಿಕೊಳ್ಳಬೇಕು. ಉಪ ಕಸಬುಗಳಾದ ಹೈನುಗಾರಿಕೆ, ಕುರಿ ಕೋಳಿ ಸಾಕಾಣಿಕೆ, ರೇಷ್ಮೆ ಕೃಷಿ ಮಾಡಬೇಕು, ಕೃಷಿ ತಜ್ಞರ ಸಲಹೆಯನ್ನು ನಿರಂತರವಾಗಿ ಪಡೆದು ಆರ್ಥಿಕವಾಗಿ ಸ್ವಾಲಂಬಿಗಳಾಗಬೇಕು ಎಂದರು.

ರೋಹಿಣಿ ಬಯೋಟೆಕ್ ಸಂಸ್ಥಾಪಕ ಡಾ. ಎಂ. ವೈ. ಕಟ್ಟಿ ಮಾತನಾಡಿ, ರೋಹಿಣಿ ಬಯೋಟೆಕ್ ಸಂಸ್ಥೆ ಕಟ್ಟುವಾಗ ಬಹಳ ಸಮವಹಿಸಿದ್ದು, ಇಂದು ಎರಡು ನೂರುಕ್ಕಿಂತ ಹೆಚ್ಚಿನ ಜನರಿಗೆ ಉದ್ಯೋಗ ನೀಡಿ, ವಿವಿಧ ಜೈವಿಕ ಪರಿಕರಗಳ ಉತ್ಪಾದನೆ, ಮಣ್ಣು ನೀರು ಪ್ರಯೋಗಾಲಯ, ಗುಣಮಟ್ಟದ ಟೆಶ್ಯೊ ಕಲ್ಚರ್ ಸಸಿಗಳ ಉತ್ಪಾದನೆ, ಸಾವಯವ ಡೈರಿ ಮುಂತಾದ ಉದ್ಯಮಗಳನ್ನು ಸ್ಥಾಪಿಸಲು ಸಾಧ್ಯವಾಯಿತು ಎಂದರು.

Advertisements

ಈ ವರದಿ ಓದಿದ್ದೀರಾ? ವಿಜಯಪುರ | ವಾರ್ಡ್ ನಂ. 29ರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಗಿರೀಶ್ ಬಿರಾದಾರ್ ಗೆಲುವು

ಕಾರ್ಯಕ್ರಮದಲ್ಲಿ ಬಾಗಲಕೋಟ್ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಆರ್ ವಿ ನಂದಗಾವಿ, ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ಎಸ್ ಎಸ್ ಚೌಹಾಣ, ವಿಜ್ಞಾನಿ ಡಾ. ವೆಂಕಣ್ಣ ಬಳಗಾನೂರ, ಡಾ. ರಮಿತಾ ರೈತರಿಗೆ ವಿವಿಧ ತಾಂತ್ರಿಕತೆಗಳ ಕುರಿತು ಸಂವಾದ ನಡೆಸಿಕೊಟ್ಟರು. ಕೃಷಿ ಅಧಿಕಾರಿ ಟಿಸಿಕಿನ್ ಡಾಂಗೆ ಇಲಾಖೆ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಬ್ಯಾಂಕಿನ ಕ್ಷೇತ್ರಾಧಿಕಾರಿ ಶ್ರದ್ಧಾ ಸ್ವಾಗತಿಸಿದರು. ಶ್ರೀಕಾಂತ್ ಕುಂಬಾರ್ ಕಾರ್ಯಕ್ರಮವನ್ನು ನಿರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X