60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕೆಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘಟನೆಗಳ ಒಕ್ಕೂಟದಿಂದ ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ದೇಶದ ರೈತರ ಬೇಡಿಕೆಗಳಾದ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕು. ಡಾ ಎಂ ಎಸ್ ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ದೇಶದ ರೈತರ ಸಂಪೂರ್ಣ ಸಾಲಮನ್ನಾ ಆಗಬೇಕು. ಫಸಲ್ ಭೀಮಾ, ಬೆಳೆವಿಮೆ ಪದ್ಧತಿ ನೀತಿ ಬದಲಾಗಬೇಕು ಎಂಬ ಬೇಡಿಕಗಳನ್ನು ಇಟ್ಟುಕೊಂಡು ಈ ಹೋರಾಟ ಮಾಡಲಾಗಿದೆ” ಎಂದು ರೈತ ಸಂಘ ಜಿಲ್ಲಾಧ್ಯಕ್ಷ ಧರ್ಮರಾಜ್ ತಿಳಿಸಿದರು.
ಇದನ್ನೂ ಓದಿದ್ದೀರಾ?ಹಾಸನ l ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ: ಸಂಸದ ಶ್ರೇಯಸ್ ಪಟೇಲ್
ಈ ವೇಳೆ ರೈತ ಸಂಘಟನೆಯ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘಟನೆಯ ಮುಖಂಡರು, ಕಾರ್ಯಕರ್ತರು ಇದ್ದರು.