ಯಾದಗಿರಿ | ಬಿಹಾರ ಬೋಧ್‌ ಗಯಾದ ಸಂಪೂರ್ಣ ಆಡಳಿತ ಬೌದ್ಧರಿಗೆ ನೀಡಬೇಕು: ಡಾ. ಭಗವಂತ ಅನ್ವಾರ

Date:

Advertisements

ಬಿಹಾರದ ಬೋಧ್‌ ಗಯಾದಲ್ಲಿರುವ ಮಹಾಬೋಧಿ ವಿಹಾರದ ಸಂಪೂರ್ಣ ಆಡಳಿತ ಬೌದ್ಧರಿಗೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಬೌದ್ಧ ಮಹಾಸಭಾ, ಅಖಿಲ ಭಾರತೀಯ ಬೌದ್ಧ ವೇದಿಕೆ ಮತ್ತು ದಲಿತ ಪ್ರಗತಿಪರ ಸಂಘಟನೆಗಳಿಂದ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದರು.

ಸಂವಿಧಾನ ದಿನದ ಪ್ರಯುಕ್ತ ಯಾದಗಿರಿ ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.

ಅಖಿಲ ಭಾರತೀಯ ಬೌದ್ಧ ವೇದಿಕೆ ಸದಸ್ಯ ಡಾ. ಭಗವಂತ ಅನ್ವಾರ ಮಾತಾನಾಡಿ, “ಬೋಧ್‌ ಗಯಾ ಟೆಂಪಲ್(ಬಿಟಿ) ಕಾಯ್ದೆ–1949 ರದ್ದು ಮಾಡಬೇಕು. ಬುದ್ಧನಿಗೆ ಜ್ಞಾನೋದಯವಾದ ಬೋಧ್‌ ಗಯಾ ಜಗತ್ತಿನಲ್ಲಿರುವ ಬೌದ್ಧರಿಗೆ ಪವಿತ್ರ ಸ್ಥಳವಾಗಿದೆ. ಈವರೆಗೂ ಬೌದ್ಧ ಪರಂಪರೆಯ ಆಡಳಿತವನ್ನು ಸಂಪೂರ್ಣವಾಗಿ ಬೌದ್ಧರಿಗೆ ನೀಡಿಲ್ಲ. ತಲಾ ನಾಲ್ವರು ಬೌದ್ಧರು ಮತ್ತು ಹಿಂದೂಗಳು ಒಳಗೊಂಡ ಆಡಳಿತ ಮಂಡಳಿ ಇರುವುದು ಸರಿಯಲ್ಲ. ಸಂಪೂರ್ಣವಾಗಿ ವಿಹಾರದ ಆಡಳಿತವನ್ನು
ಬೌದ್ಧರಿಗೆ ನೀಡಬೇಕು” ಎಂದು ಆಗ್ರಹಿಸಿದರು.

Advertisements

“ದಲಿತ ಸಂವಿಧಾನದ ಕಲಂ 25, 26 ಮತ್ತು 29ರ ಅನ್ವಯ ಎಲ್ಲ ಜಾತಿ, ಜನಾಂಗದವರು ಸ್ವತಂತ್ರವಾಗಿ ದೇವಸ್ಥಾನ, ಮಂದಿರ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಆಯಾ ಜಾತಿಗಳ ದೇವಸ್ಥಾನ, ಟ್ರಸ್ಟ್‌ಗಳಿಗೆ ಆಯಾ ಜಾತಿಗಳ ಪ್ರಮುಖ ಆಡಳಿತ ಮಂಡಳಿಗಳಿವೆ. ಆದರೆ, ಬೋಧ್‌ ಗಯಾದಲ್ಲಿ ಇದಕ್ಕೆ ವಿರುದ್ಧವಾದ ಆಡಳಿತ ಮಂಡಳಿಯಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಹಿರಿಯ ದಲಿತ ಮುಖಂಡ ಮರೆಪ್ಪ ಚಟ್ಟೇರಕರ್ ಮಾತನಾಡಿ, “ಸಂವಿಧಾನ ವಿರೋಧಿಯಾದ ಬಿಟಿ ಕಾಯ್ದೆ–1949ರ ಅಡಿ ಆಡಳಿತ ಮಂಡಳಿಯೊಳಗೆ ಸೇರಿಸಿ ಹಿಂದೂ ಪುರೋಹಿತರು ಬೌದ್ಧರ ಇತಿಹಾಸ ಮತ್ತು ಸಂಸ್ಕೃತಿ ನಾಶಮಾಡಲು ಯತ್ನಿಸುತ್ತಿದ್ದಾರೆ. ಹಾಗಾಗಿ ಇದನ್ನು ವಿರೋಧಿಸಿ ಇಂದು ದೇಶಾದ್ಯಂತ ಈ ಬಗ್ಗೆ ಗಮನ ಸೆಳೆದು ಸರ್ಕಾರದ ಮೇಲೆ ಒತ್ತಡ ತರಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿ ಮನವಿ ನೀಡುತ್ತಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾಸನ l 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕು: ರೈತ ಧರ್ಮರಾಜ್

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಕ್ರಾಂತಿ, ನಾಗಣ್ಣ ಬಡಿಗೇರಿ, ಮಾಳಪ್ಪ ಕಿರದಳ್ಳಿ, ರಾಮಣ್ಣ ಕಲ್ಲದೇವನಹಳ್ಳಿ, ನಿಂಗಪ್ಪ ಕೊಲ್ಲೂರಕರ್, ರಾಮಣ್ಣ ಸಾಧ್ಯಾಪೂರ, ಗೋಪಾಲ ತೆಳಗೇರಿ, ಮಹಾದೇವ್ ದಿಗ್ಗಿ, ರಾಹುಲ್ ಹುಲಿಮನಿ, ಸುರೇಶ್ ಬೊಮ್ಮನ್, ಪರಶುರಾಮ ಒಡೆಯರ್, ನಿಂಗಪ್ಪ ಬೀರನಾಳ, ಮರೆಪ್ಪ ಜಾಲಿಮಂಚಿ, ಬಸವರಾಜ್ ಗುಡಿಮನಿ, ಮಾಪಣ್ಣ ಬಡಿಗೇರ್, ವಸಂತ್ ಸುಂಗುಲಕರ್, ಬಾಲರಾಜ್ ಖಾನಾಪುರ, ಮಹಾದೇವಪ್ಪ ಬಿಜೆಸಪುರ್, ಅಝೀಜ್‌ಸಾಬ್‌, ಶಿವು ಬಂದಳ್ಳಿ, ಭೀಮರಾಯ್ ಸುಂಗುಲ್, ಮಲ್ಲು ಬೊಮ್ಮುನ್, ನಾಗಣ್ಣ ಕಳ್ಳದೇವನಳ್ಳಿ ಸೇರಿದಂತೆ ಬಹುತೇಕ ಮಂದಿ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X