ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಫೆಂಗಲ್ ಚಂಡಮಾರುತ ಬೀಸುತ್ತಿದೆ. ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನ ನಾಗಪಟ್ಟಣಂ, ಮೈಲಾಡುತುರೈ ಹಾಗೂ ತಿರುವರೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆ ಜಿಲ್ಲೆಗಳಲ್ಲಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಗಂಟೆಗೆ 13 ಕಿ.ಮೀ ವೇಗದಲ್ಲಿ ಚಂಡಮಾರುತ ಬೀಸುತ್ತಿದೆ. ತಮಿಳುನಾಡಿನ ಇನ್ನೂ ಹೆಚ್ಚು ಮಳೆ ಸುರಿಯಲಿದೆ. ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣದಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈಗಾಗಲೇ ತಮಿಳುನಾಡಿನ ತಿರುಚಿರಾಪಲ್ಲಿ, ನಾಗಪಟ್ಟಣಂ, ಮೈಲಾಡುತುರೈ, ಕಡಲೂರು, ತಂಜಾವೂರು, ವಿಲ್ಲುಪುರಂ ಹಾಗೂ ತಿರುವಾರೂರ್ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪುದುಚೇರಿಯಲ್ಲಿಯೂ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಮೀನುಗಾರರು ನವೆಂಬರ್ 29 ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಲಡಾಗಿದೆ.
ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಂಗಳವಾರ ರಾತ್ರಿಯಿಡೀ ಭಾರೀ ಮಳೆಯಾಗಿದೆ. ಬೆಳೆದ ಭತ್ತದ ಬೆಳೆಗಳಿಗೆ ಹಾನಿಯಾಗಿದೆ. ಅಂದಾಜು 2,000 ಎಕರೆಗೂ ಹೆಚ್ಚು ಬೆಳೆ ಹಾನಿಯಾಗಿದೆ.
ಕರ್ನಾಟಕದಲ್ಲಿಯೂ ಮಂಗಳವಾರದಿಂದಲೇ ಮೋಡ ಕವಿದ ವಾತಾವರಣವಿದ್ದು, ಬುಧವಾರ ರಾತ್ರಿ ಇಂದ ಮಳೆ ಸುರಿಯುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.