ಚಿಕ್ಕಬಳ್ಳಾಪುರ | ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ಸಾವು

Date:

Advertisements

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಆದರ್ಶ ಚಿತ್ರಮಂದಿರದ ಮುಂಭಾಗದಲ್ಲಿ ಕೆಎಸ್ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತವಾಗಿದ್ದು, ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಶಿಡ್ಲಘಟ್ಟ ರಸ್ತೆಯಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನದಲ್ಲಿ ಪತಿ ಮತ್ತು ಪತ್ನಿ ಕೊಮ್ಮಸಂದ್ರ ಗ್ರಾಮದಿಂದ ಚಿಂತಾಮಣಿ ತಾಲೂಕಿನ ಹೊರವಲಯದ ನಾರಾಯಣಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ ಶಿಡ್ಲಘಟ್ಟ ತಾಲೂಕಿನ ಬುರುಡುಗುಂಟೆ ಪಂಚಾಯಿತಿ ವ್ಯಾಪ್ತಿಯ ಕೊಮ್ಮಸಂದ್ರ ಗ್ರಾಮದ ನಿವಾಸಿ ವೆಂಕಟೇಶಪ್ಪ(39) ಮತ್ತು ಪತ್ನಿ ಸರಸ್ವತಮ್ಮ(35) ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿಯಿಂದ ಮೈಸೂರಿಗೆ ಪ್ರವಾಸ ಬಂದಿದ್ದ ಶಾಲಾ ಮಕ್ಕಳಿದ್ದ ಬಸ್ ಪಲ್ಟಿ

Advertisements

ಮೃತ ದಂಪತಿ ಚಿಂತಾಮಣಿ ತಾಲೂಕಿನ ನಾರಾಯಣಹಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ವೇಳೆ ರಸ್ತೆ ಮಾರ್ಗದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಪಿ. ಮುರಳಿಧರ್, ನಗರ ಸರ್ಕಲ್ ಇನ್‌ಸ್ಪೆಕ್ಟರ್‌ ವಿಜಿ ಕುಮಾರ್, ಗ್ರಾಮಾಂತರ ಠಾಣೆಯ ಸಬ್ ಇನ್‌ಸ್ಪೆಕ್ಟರ್‌ ಮಮತಾ ಭೇಟಿ ನೀಡಿ ಸ್ಥಳದಲ್ಲೇ ಮೃತಪಟ್ಟಿದ್ದ ಮೃತ ದೇಹಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X