ಅನಾರೋಗ್ಯದಿಂದ ಬಳಲುತ್ತಿದ್ದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಹಿರಿಯ ಪೀಠಾಧ್ಯಕ್ಷರಾದ, ಡಾ. ನಂಜುಂಡ ಮಹಾಸ್ವಾಮೀಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಸಂಜೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಡಾ. ನಂಜುಂಡ ಮಹಾಸ್ವಾಮೀಜಿಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಾಲ್ಯ ಸ್ನೇಹಿತರಾಗಿದ್ದರು, ಛಲವಾದಿ ಮಠಗಳು ಹಾಗೂ ಹಲವಾರು ವಿದ್ಯಾ ಸಂಸ್ಥೆಗಳನ್ನು ಬೆಳೆಸುವಲ್ಲಿ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ನಮ್ಮ ಸಮಾಜಕ್ಕೆ ತುಂಬಲಾರದ ನಷ್ಟವೆಂದು ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಅವರು ಸಂತಾಪ ಸೂಚಿಸಿದ್ದಾರೆ. ಅಂತ್ಯ ಸಂಸ್ಕಾರ ಕಾರ್ಯವು ಗುರುವಾರ ಜರುಗಲಿದೆ ಎಂದು ತಿಳಿಸಿದ್ದಾರೆ.