ಕೇರಳದ ವಯನಾಡ್ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ ಗುರುವಾರ ಸಂಸದೆಯಾಗಿ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶಾದ್ಯಂತ ಪಕ್ಷ ಸಂಘಟನೆ ಮತ್ತು ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದ ಪ್ರಿಯಾಂಕಾ ಈಗ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕ, ತಮ್ಮ ಸಹೋದರ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಸಾಥ್ ನೀಡಲಿದ್ದಾರೆ.
ಉಪಚುನಾವಣೆ ನಡೆದ ಬಳಿಕ ಬುಧವಾರದಿಂದ ಸಂಸತ್ ಅಧಿವೇಶನ ಆರಂಭವಾಗಿದೆ. ಗುರುವಾರ ಪ್ರಿಯಾಂಕಾ ಗಾಂಧಿ ಅವರು ಸಂವಿಧಾನದ ಪ್ರತಿ ಹಿಡಿದುಕೊಂಡು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Big Breaking –
— Venisha G Kiba (@KibaVenisha) November 28, 2024
Priyanka Gandhi Ji has taken oath as the Member of Parliament. She is an MP officially now. 🔥🔥
Nightmare for Modi Shah in the Parliament…🔥 pic.twitter.com/DjcZ0mYO1q
ಪ್ರಿಯಾಂಕಾ ಗಾಂಧಿ 2019ರಿಂದ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಅವರು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸಂಘಟನೆಯ ಜವಾಬ್ದಾರಿ ಹೊತ್ತಿದ್ದರು. ಬಳಿಕ, ದೇಶಾದ್ಯಂತ ಪಕ್ಷ ಕಟ್ಟುವಲ್ಲಿಯೂ ತೊಡಗಿಸಿಕೊಂಡಿದ್ದರು.
ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಿಯಾಂಕಾ ಅವರನ್ನು ವಯನಾಡ್ ಮತದಾರರು ಕೈಹಿಡಿದಿದ್ದು, 6.20 ಲಕ್ಷ ಮತಗಳನ್ನು ಪಡೆದು, ಬರೋಬ್ಬರಿ 4.10 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದಾರೆ.
ಮಹಾರಾಷ್ಟ್ರದ ನಾಂದೇಡ್ ಉಪಚುನಾವಣೆಯಲ್ಲಿ ಗೆದ್ದಿದ್ದ ಕಾಂಗ್ರೆಸ್ನ ರವೀಂದ್ರ ಚವಾಣ್ ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ.