ಪ್ರವಾಸಕ್ಕೆ ತೆರಳಿದ್ದ ಶಾಲಾಬಸ್ ಪಲ್ಟಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಗತಿನಗರ ಗ್ರಾಮದ ಬಳಿ ನಡೆದಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್‌ನಿಂದ ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಪ್ರಗತಿನಗರದ ಹತ್ತಿರ ಕಂದಕಕ್ಕೆ ಉರುಳಿದೆ. ಬಸ್‌ನಲ್ಲಿ ಸುಮಾರು 60 ಮಂದಿ ವಿದ್ಯಾರ್ಥಿಗಳು ಹಾಗೂ 7 ಮಂದಿ ಶಿಕ್ಷಕರು ಇದ್ದರು. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬಾಣಂತಿ ಸಾವು ಪ್ರಕರಣ | ತನಿಖೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗೆ ಸಚಿವ ಜಮೀರ್ ಸೂಚನೆ
ಸಾಮಾನ್ಯವಾಗಿ ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಕೈಗೊಂಡಿದ್ದರು. ಘಟನೆ ನಂತರ ಸ್ಥಳಕ್ಕೆ ಪೊಲೀಸರು ಮತ್ತು ಸಾರಿಗೆ ಇಲಾಖೆಯವರು ಆಗಮಿಸಿ ಮಕ್ಕಳನ್ನು ವೀಕ್ಷಿಸಿ ಬದಲಿ ಬಸ್ ವ್ಯವಸ್ಥೆ ಮಾಡಿ ಕಳುಹಿಸಿದ್ದಾರೆಂದು ಹೇಳಲಾಗಿದೆ.
