ಬೆಳಗಾವಿ ಅಧಿವೇಶನ | ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆಯೇ ನಮ್ಮ ಚರ್ಚೆ: ಆರ್‌ ಅಶೋಕ್

Date:

Advertisements

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಅಧಿವೇಶನದಲ್ಲಿ ಮಾತನಾಡಲಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಉತ್ತರ ಕರ್ನಾಟಕ ಭಾಗದ ಬಿಜೆಪಿ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ ಸರ್ಕಾರ ಹಣ ಇದೆ ಎಂದು ಹೇಳುತ್ತಲೇ ಇದೆ. ಆದರೂ ಉತ್ತರ ಕರ್ನಾಟಕಕ್ಕೆ ಯಾವುದೇ ಅನುದಾನ ನೀಡಿಲ್ಲ. ಎಷ್ಟು ಹೂಡಿಕೆ ಬಂದಿದೆ, ಎಷ್ಟು ಬೆಳೆಹಾನಿ ಪರಿಹಾರ ಸಿಕ್ಕಿದೆ, ನೀರಾವರಿ ಯೋಜನೆಗೆ ಎಷ್ಟು ಅನುದಾನ ನೀಡಲಾಗಿದೆ ಎಂಬ ಬಗ್ಗೆ ಉತ್ತರ ಕರ್ನಾಟಕದ ಬಿಜೆಪಿ ಶಾಸಕರು ಚರ್ಚೆ ಮಾಡಿದ್ದಾರೆ” ಎಂದರು.

“ನಂಜುಂಡಪ್ಪ ವರದಿಗೆ ಚಾಲನೆ ನೀಡುತ್ತೇವೆ ಎಂದು ಸರ್ಕಾರ ಹೇಳಿ ವರ್ಷವಾಗುತ್ತಾ ಬಂದಿದೆ ಎಂಬುದು ಕೂಡ ಚರ್ಚೆಯಾಗಿದೆ. ಇದನ್ನು ಸದನದಲ್ಲಿ ಪ್ರಶ್ನಿಸುವ, ಮಾತನಾಡುವ ಬಗ್ಗೆ ಶಾಸಕರು ಹೇಳಿದ್ದಾರೆ. ಕಾಂಗ್ರೆಸ್‌ ಹೇಳಿದ್ದು ಏನು, ಉತ್ತರ ಕರ್ನಾಟಕಕ್ಕೆ ನೀಡಿದ್ದೇನು ಎಂಬ ಬಗ್ಗೆ ಶಾಸಕರೇ ಮಾತನಾಡಲಿದ್ದಾರೆ” ಎಂದು ತಿಳಿಸಿದರು.

Advertisements

“ಸಾರಿಗೆ ಇಲಾಖೆ ನೌಕರರು ಬಂದ್‌ ಮಾಡುತ್ತೇವೆ ಎಂದು ಹೇಳಿದ್ದಾರೆ. ಅಬಕಾರಿ ಇಲಾಖೆ ಗುತ್ತಿಗೆದಾರರು ಕೂಡ ಬಂದ್‌ ಮಾಡಲು ಮುಂದಾಗಿದ್ದರು. ಈ ನಡುವೆ ರಸ್ತೆ ಅಭಿವೃದ್ಧಿ, ಆಸ್ಪತ್ರೆ ನಿರ್ಮಾಣ, ಬೆಳೆಹಾನಿ ಪರಿಹಾರ ಯಾವುದಕ್ಕೂ ಹಣ ಇಲ್ಲ. ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡಲು ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಆದರೆ ಈವರೆಗೆ ಯಾವುದೇ ಯೋಜನೆಯ ಕಾರ್ಯಾದೇಶವಾಗಿಲ್ಲ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತೀಯ ಜನತಾ ಪಕ್ಷಕ್ಕೆ ನೀತಿಯೂ ಇಲ್ಲ, ರೀತಿಯೂ ಇಲ್ಲ

“ಅಬಕಾರಿ ಇಲಾಖೆಯಲ್ಲಿ ಪರವಾನಗಿಗೆ ಅರ್ಜಿ ಸಲ್ಲಿಸಿದಾಗ ಲಂಚ ಕೇಳಿದ ಧ್ವನಿಮುದ್ರಣ ಈಗ ಬಿಡುಗಡೆಯಾಗಿದೆ. ಕಾಂಗ್ರೆಸ್‌ ಕಾರ್ಯಕರ್ತ ಆಗಿರುವುದರಿಂದ 50% ರಿಯಾಯಿತಿ ಎಂದು ಅಧಿಕಾರಿ ಹೇಳಿದ್ದಾರೆ. ಇದು ಈಗ ಜಗಜ್ಜಾಹೀರಾಗಿದೆ. ಈ ಭ್ರಷ್ಟಾಚಾರದ ವಿರುದ್ಧವೂ ಬಿಜೆಪಿ ಹೋರಾಟ ಮಾಡಲಿದೆ. ಇಷ್ಟು ಸಾಕ್ಷಿ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ಪುಸ್ತಕ ಎಂದು ಹೇಳುತ್ತಿದ್ದಾರೆ. ದಾಖಲೆ ನೀಡಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಅವರು ರಾಜೀನಾಮೆ ನೀಡಲಿ” ಎಂದು ಆಗ್ರಹಿಸಿದರು.

“ಸರ್ಕಾರಿ ಆಸ್ಪತ್ರೆಗಳಲ್ಲಿ ಶುಲ್ಕ ಏರಿಕೆಯಾಗಿದೆ. ಆಸ್ಪತ್ರೆಗಳೇ ವಸೂಲಿ ಕೇಂದ್ರಗಳಾಗಿವೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಕುರಿತು ವರದಿ ತರಿಸಿಕೊಳ್ಳುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X