ಆದಿ ಉಡುಪಿ ಹಳೆ ಆರ್.ಟಿ.ಓ ಕಛೇರಿ ಸನಿಹ ನಿರ್ಮಾಣ ಹಂತದ ಕಟ್ಟಡದಲ್ಲಿ ಯುವಕನ ಶವವು ನೇಣುಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿರುವ ಘಟನೆ ನಡೆದಿದೆ. ಉಡುಪಿ ನಗರ ಪೋಲಿಸ್ ಠಾಣೆಯ ಎ.ಎಸ್.ಐ ಹರೀಶ್, ಹಾಗೂ ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಕೊಳೆತ ಶವವನ್ನು ಕೆಳಗಿಳಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲು ನೆರವಾದರು.
ಸಾವಿಗೆ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಶವವು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು ಎಳು ದಿನಗಳು ಕಳೆದಿರ ಬಹುದೆಂದು ಅಂದಾಜಿಸಲಾಗಿದೆ. ಮೃತನ ಹೆಸರು ವಿಳಾಸ ತಿಳಿದುಬಂದಿಲ್ಲ, ಹೊರ ರಾಜ್ಯದ ವಲಸೆ ಕಾರ್ಮಿಕ ಎಂದು ತಿಳಿದುಬಂದಿದೆ.
