ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಮೋಹಿತ್ ನರಸಿಂಹ ಮೂರ್ತಿ ಬಂಧನವಾಗಿದ್ದಾನೆ.
ಬೆಂಗಳೂರು ನಗರದ ಕಾಟನ್ ಪೇಟೆ ಹಾಗೂ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಮೋಹಿತ್ ವಿರುದ್ಧ ದೂರು ದಾಖಲಾಗಿತ್ತು. ಬಳಿಕ ಉತ್ತರಾಖಂಡದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ತುಮಕೂರು ಪೊಲೀಸರು ಬಂಧಿಸಿ ಕರೆತರುತ್ತಿದ್ದಾರೆ.
ಮೋಹಿತ್ ನರಸಿಂಹ ಮೂರ್ತಿ ಎಂಬಾತ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಜತೆಗೆ ಜಾತಿ ನಿಂದನೆಯನ್ನೂ ಮಾಡಿದ್ದರ ಕುರಿತು ದೂರು ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದರು.
ಈ ಸುದ್ದಿ ಓದಿದ್ದೀರಾ? ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ವರ್ಗಾವಣೆಗೆ ಡಿವೈಎಫ್‌ಐ ಆಗ್ರಹ
ಪೊಲೀಸರು ಮೊಬೈಲ್ ಟವರ್ ಪತ್ತೆಹಚ್ಚಿ ಉತ್ತರಾಖಂಡದಲ್ಲಿ ಬಂಧಿಸಿ ಕರೆತರುತ್ತಿದ್ದು, ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.