ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ: ಹವಾಮಾನ ಇಲಾಖೆ

Date:

Advertisements
  • ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಬೀಸುತ್ತಿರುವ ಮೋಚಾ ಚಂಡಮಾರುತ
  • ರಾಜ್ಯದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮೋಚಾ ಚಂಡಮಾರುತ ಬೀಸುತ್ತಿದೆ ಪರಿಣಾಮ, ರಾಜ್ಯದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಗಾಳಿಯ ವೇಗ ಹೆಚ್ಚಾಗಿರಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ರಾಮನಗರ, ಮಂಡ್ಯ, ಮೈಸೂರು ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’​ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ‌ ಇಲಾಖೆ ತಿಳಿಸಿದೆ.

Advertisements

“ತಮಿಳುನಾಡಿನಲ್ಲಿ ಸಮುದ್ರಮಟ್ಟದಿಂದ 1.5 ಮೇಲ್ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಇದ್ದು, ರಾಜ್ಯದಲ್ಲಿ ಇನ್ನೂ 5 ದಿನಗಳವರೆಗೆ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ, ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ” ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಡಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಐಎನಲ್ಲಿ ಚರಂಡಿ ಸ್ವಚ್ಛಗೊಳಿಸುತ್ತಿದ್ದ ಕಾರ್ಮಿಕ ಸಾವು

ಮಂಗಳವಾರವೂ ಸುರಿದ ಧಾರಾಕಾರ ಮಳೆ

ಮಂಗಳವಾರವೂ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಜೋರು ಮಳೆಯಾಗಿದೆ. ಹೆಬ್ಬಾಳ, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ ಸೇರಿ ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.

ಮಲ್ಲೇಶ್ವರಂ, ಮಂತ್ರಿಮಾಲ್ ರಸ್ತೆಯಲ್ಲಿ ನೀರು ನಿಂತ ಪರಿಣಾಮ ಕೆರೆಯಂತಾಗಿದ್ದವು. ಮೆಜೆಸ್ಟಿಕ್, ಶಿವಾನಂದ ಸರ್ಕಲ್ ಸುತ್ತಮುತ್ತ ಕೂಡ ಭಾರೀ ಮಳೆಯಾಗಿದೆ. ಶಿವಾನಂದ ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರು ತುಂಬಿಕೊಂಡಿತ್ತು. ಅಂಡರ್ ಪಾಸ್ ಬಂದ್ ಮಾಡಿ, ವಾಹನ ಸಂಚಾರ ತಡೆಯಲು ಬ್ಯಾರಿಕೇಡ್ ಹಾಕಿರಲಿಲ್ಲ. ಹೀಗಾಗಿ ವಾಹನಗಳು ಮಳೆ ನೀರಿನಲ್ಲಿ ಸಿಕ್ಕಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ಕೆಆರ್ ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಮಂಗಳವಾರ ಸುರಿದ ಮಳೆಯಿಂದಾಗಿ ಮೂರು ಅಡಿಗೂ ಹಚ್ಚು ಮಳೆ ನೀರು ನಿಂತಿತ್ತು. ಅಂಡರ್ ಪಾಸ್‍ಗೆ ಈಗಾಗಲೇ ಬಿಬಿಎಂಪಿ ಬ್ಯಾರಿಕೇಡ್ ಹಾಕಿದೆ.  ಅಂಡರ್ ಪಾಸ್‌ಗೆ ಮಳೆ ನೀರು ಹರಿದು ಬರುತ್ತಿದ್ದು, ಬಿಬಿಎಂಪಿ ಅಧಿಕಾರಿಗಳು ನೀರು ಪೋಲಾಗಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಜೆಪಿ ನಗರ, ಜಯನಗರ, ಕೋರಮಂಗಲ, ಲಾಲ್‍ಬಾಗ್, ಬಿಟಿಎಂ ಲೇಔಟ್, ಬನ್ನೇರುಘಟ್ಟ, ಬೇಗೂರು, ದೊಮಲೂರು, ಬನಶಂಕರಿ, ಬಸವನಗುಡಿ, ಬಿನ್ನಿಪೇಟೆ ಹಾಗೂ ಮೈಸೂರು ರಸ್ತೆಯಲ್ಲಿಯೂ ಹೆಚ್ಚಿನ ಮಳೆಯಾಗಿದೆ.

ತುರ್ತು ಸಂದರ್ಭಕ್ಕೆ ಬಿಬಿಎಂಪಿಯಿಂದ ಹೆಲ್ಪ್‌ ಲೈನ್ ನಂ

ಮಳೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮರ-ವಿದ್ಯುತ್ ಕಂಬಗಳು ನೆಲಕ್ಕೊರಗಿವೆ. ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ ಉಂಟಾಗುತ್ತಿದೆ. ರಸ್ತೆ ಮತ್ತು ಅಂಡರ್‌ಪಾಸ್‌ಗಳಲ್ಲಿ ನೀರು ನಿಂತು ಭಾರೀ ಅವಘಡ ಸಂಭವಿಸುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಸಾರ್ವಜನಿಕರ ಸಮಸ್ಯೆಗಳನ್ನು ಪಾಲಿಕೆ ಗಮನಕ್ಕೆ ತರಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 8 ವಲಯಗಳಲ್ಲಿ ಹೆಲ್ಪ್‌ ಲೈನ್ ನಂ ಬಿಡುಗಡೆ ಮಾಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X