ಆರ್‌ಸಿಬಿಗೆ ಕರವೇ ಎಚ್ಚರಿಕೆ | ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿ ಹೇರುವ ಉದ್ದೇಶವಿದ್ದರೆ ರಾಜ್ಯ ಬಿಟ್ಟು ತೊಲಗಿ

Date:

Advertisements

ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ಕರ್ನಾಟಕ ಬಿಟ್ಟು ತೊಲಗಲಿ. ನಿಮ್ಮ ಅವಶ್ಯಕತೆ ನಮಗಿಲ್ಲ‌ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಎಚ್ಚರಿಸಿದ್ದಾರೆ.

ಆರ್‌ಸಿಬಿಯನ್ನು ಕನ್ನಡಿಗರು ಮೊದಲಿನಿಂದಲೂ ಬೆಂಬಲಿಸಿಕೊಂಡು ಬಂದಿದ್ದಾರೆ. ಆರ್‌ಸಿಬಿಗೆ ಇರುವಷ್ಟು ಅಭಿಮಾನಿಗಳು ಇನ್ಯಾವ ತಂಡಕ್ಕೂ ಇಲ್ಲ‌. ಹೀಗಾಗಿಯೇ ಅದರ ಆದಾಯ ವರ್ಷವರ್ಷಕ್ಕೂ ಹೆಚ್ಚುತ್ತಲೇ ಇದ್ದು, ಒಮ್ಮೆಯೂ ಕಪ್ ಗೆಲ್ಲದಿದ್ದರೂ ಮೂರನೇ ಶ್ರೀಮಂತ ತಂಡವಾಗಿದೆ. ಇದಕ್ಕೆ ಕಾರಣ ಕನ್ನಡಿಗರು ಎಂಬುದನ್ನು ಅದು ಮರೆತಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಆರ್‌ಸಿಬಿ ಹಿಂದಿಯಲ್ಲಿ ಪುಟವನ್ನು ತೆರೆಯುವ ಮೂಲಕ ಕನ್ನಡಿಗರನ್ನು ಅಪಮಾನಿಸುತ್ತಿದೆ. ತಂಡದಲ್ಲಿ ಇತರ ರಾಜ್ಯಗಳ ಆಟಗಾರರಿದ್ದಾರೆ ಎಂಬ ಕಾರಣಕ್ಕೆ, ಹೊರರಾಜ್ಯಗಳಲ್ಲೂ ಅಭಿಮಾನಿಗಳಿದ್ದಾರೆ ಎಂಬ ಕಾರಣಕ್ಕೆ ಹಿಂದಿಯಲ್ಲಿ ಪುಟ ತೆರೆದಿರುವುದಾದರೆ, ದೇಶದ ಎಲ್ಲ ಭಾಷೆಗಳಲ್ಲೂ ಪುಟ ತೆರೆಯಬೇಕಿತ್ತು. ಹಿಂದಿಯಲ್ಲಿ ಮಾತ್ರ ಯಾಕೆ ತೆರೆದರು ಎಂದು ಪ್ರಶ್ನಿಸಿದ್ದಾರೆ.

Advertisements

ಆರ್‌ಸಿಬಿ ಫ್ರಾಂಚೈಸಿ ನಡೆಸುತ್ತಿರುವವರಿಗೆ ಹಿಂದಿಯೇ ಅತಿಪ್ರಿಯವಾಗಿದ್ದರೆ ಹಿಂದಿ ರಾಜ್ಯಗಳಿಗೆ ವಲಸೆ ಹೋಗಲಿ, ಬೆಂಗಳೂರು ಎಂಬ ಹೆಸರನ್ನು ಕೈಬಿಡಲಿ. ಕನ್ನಡಿಗರ ಆದರ, ಆತಿಥ್ಯ, ಅಭಿಮಾನವನ್ನು ಗಳಿಸಿ ಕನ್ನಡಿಗರ ಬೆನ್ನಿಗೆ ಚೂರಿ ಇರಿಯುವ ಕೆಲಸವನ್ನೇಕೆ ಮಾಡುತ್ತಿದ್ದಾರೆ? ಈ ಬಾರಿಯ ಹರಾಜು ಪ್ರಕ್ರಿಯೆಯಲ್ಲಿ ಆರ್ ಸಿಬಿ ಐದಾರು ಕನ್ನಡಿಗರನ್ನು ಖರೀದಿಸುವ ನಿರೀಕ್ಷೆ ಅಭಿಮಾನಿಗಳಿಗಿತ್ತು. ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ಖರೀದಿಸಿ ನಾಯಕನನ್ನಾಗಿಸುವ ಅವಕಾಶವೂ ಆರ್‌ಸಿಬಿಗೆ ಇತ್ತು. ಆದರೆ ಹಿತ್ತಲ ಗಿಡ ಮದ್ದಲ್ಲ ಎಂಬಂತೆ ಅವಕಾಶಗಳನ್ನು ಕೈಚೆಲ್ಲಲಾಯಿತು” ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಿಂದಿ ಭಾಷಿಕರಿಗೆ ಆರ್‌ಸಿಬಿ ಟ್ವಿಟ್ಟರ್ ಖಾತೆ; ಕನ್ನಡಿಗರಿಂದ ತೀವ್ರ ಆಕ್ರೋಶ

ಕರ್ನಾಟಕ ಪರವಾಗಿ ಆಡುತ್ತಿರುವ ಹಲವಾರು ಪ್ರತಿಭಾವಂತ ಆಟಗಾರರನ್ನು ಆರ್‌ಸಿಬಿ ಮೊದಲಿನಿಂದಲೂ ನಿರ್ಲಕ್ಷಿಸುತ್ತ ಬಂದಿದೆ. ಈ ಬಾರಿಯೂ ಅದೇ ಆಗಿದೆ. ದೇವದತ್ತ ಪಡಿಕ್ಕಲ್, ಮನೋಜ್ ಬಾಂಡಗೆ ಹೊರತುಪಡಿಸಿ ಯಾವ ಕನ್ನಡಿಗರನ್ನೂ ಖರೀದಿಸುವ ಮನಸು ಮಾಡಲಿಲ್ಲ. 25 ಆಟಗಾರರ ಪೈಕಿ 22 ಆಟಗಾರರನ್ನು ಖರೀದಿ ಮಾಡಲಾಗಿದೆ. ಬಾಕಿ ಉಳಿದಿರುವ ಇನ್ನು ಮೂರು ಸ್ಥಾನಗಳಿಗಾದರೂ ಕನ್ನಡಿಗ ಆಟಗಾರರನ್ನೇ ಖರೀದಿಸಬೇಕು. ಸಾಮಾಜಿಕ ಜಾಲತಾಣಗಳಿಂದ ಈ ಕೂಡಲೇ ಹಿಂದಿ ಪುಟಗಳನ್ನು ಅಳಿಸಿಹಾಕಬೇಕು. ಇಲ್ಲವಾದಲ್ಲಿ ಪರಿಣಾಮ ನೆಟ್ಟಗಿರುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಕನ್ನಡಿಗರ ಪ್ರೀತಿ, ಅಭಿಮಾನಗಳಿಂದ ಆರ್‌ಸಿಬಿ ಬೆಳೆದಿದೆ. ಆದರೆ ಅದು ಮಾಡಿರುವ ವಿಶ್ವಾಸಘಾತಕತನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅದು ತನ್ನ ತಪ್ಪುಗಳನ್ನು ಈ ಕೂಡಲೇ ತಿದ್ದಿಕೊಳ್ಳದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ತೀವ್ರ ಸ್ವರೂಪದ ಪ್ರತಿಭಟನೆ ಎದುರಿಸಬೇಕಾಗುತ್ತದೆ. ಮುಂದಿನ ಪರಿಣಾಮಗಳಿಗೆ ನಾವು ಹೊಣೆಯಲ್ಲ ಎಂದು ಎಚ್ಚರಿಸುತ್ತಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X