ತುಮಕೂರು | ಗುಡುಗು-ಸಿಡಿಲು ಸಹಿತ ಮಳೆ : ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ : ಜಿಲ್ಲಾಧಿಕಾರಿ

Date:

Advertisements

 ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 4 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. 

ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ :

ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  

Advertisements

ಭಾರಿ ಮಳೆ, ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮಳೆ ಮುನ್ನಚ್ಚರಿಕೆ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರಬೇಕು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವವಿರುತ್ತದೆ. ಇದರಿಂದ ಸಾವು-ನೋವುಗಳು ಉಂಟಾಗಬಹುದಾದ್ದರಿಂದ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಿಳಿ ಹೇಳಬೇಕು ಎಂದು ತಿಳಿಸಿದ್ದಾರೆ. 

ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದ ಅಧಿಕಾರಿ, ಸಿಬ್ಬಂದಿ ಕೇಂದ್ರಸ್ಥಾನದಲ್ಲಿದ್ದುಕೊಂಡು ಮಳೆಯಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಮುಂಜಾಗ್ರತೆ ವಹಿಸಬೇಕು. ನಿರಂತರ ಮಳೆಯಿಂದ ದುರ್ಬಲ ಮಣ್ಣಿನ ಮನೆ, ಕಟ್ಟಡ, ದುರ್ಬಲ ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಶಾಲೆ, ಅಂಗನವಾಡಿ ಮೇಲ್ಛಾವಣಿ, ಗೋಡೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ ಕೆಳ ಸೇತುವೆ ರಸ್ತೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. 

ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯ, ಜಿಲ್ಲಾಡಳಿತ, ತಾಲ್ಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಗ್ರಾಮ ಪಂಚಾಯತಿಯ ವಿಪತ್ತು ನಿರ್ವಹಣಾ ಸಮಿತಿಗಳು ಪ್ರತಿ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.  

ಸಾರ್ವಜನಿಕರಲ್ಲಿ ಮನವಿ

ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ನದಿ, ಹಳ್ಳದ, ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು, ಮತ್ತಿತರೆ ಚಟುವಟಿಕೆಗಳನ್ನು ನಡೆಸಬಾರದು. ನದಿ, ಹಳ್ಳ, ಕೆರೆ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಪೋಟೋ,  ಸೆಲ್ಫಿಗಳನ್ನು ತೆಗೆಯಬಾರದು. ಮಕ್ಕಳು ಮತ್ತು ವಯೋವೃದ್ಧರನ್ನು ಮನೆಯಿಂದ ಹೊರಗಡೆ ಒಂಟಿಯಾಗಿ ತೆರಳದಂತೆ ಎಚ್ಚರಿಕೆ ವಹಿಸಬೇಕು. ಗುಡುಗು-ಮಿಂಚು, ಸಿಡಿಲು ಬಡಿಯುವ ಸಂದರ್ಭದಲ್ಲಿ ಮನೆಯ ಹೊರಗಡೆ ಇರುವವರು ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶಕ್ಕೆ ತೆರಳಿ ರಕ್ಷಣೆ ಪಡೆದುಕೊಳ್ಳಬೇಕು. ಮರ, ವಿದ್ಯುತ್ ಕಂಬ, ಜಲಾಶಯ ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ ಜನ ಸಂದಣಿಯಾಗದಂತೆ ಅಂತರ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. 

ಕೆರೆ-ಕಟ್ಟೆಗಳ ಏರಿ, ಬಂಡ್,  ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ, ನಿಂತಿದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್, ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ, ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟವಾಗಿದ್ದಲ್ಲಿ, ಇತರೆ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಾದ 7304975519, 0816-2213400, 155304ಕ್ಕೆ ಕರೆ ಮಾಡಿ ನೆರವು ಪಡೆಯಬಹುದಾಗಿದೆ ಎಂದು  ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X