ಎಡಗೈ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸಿದ ಸರ್ಕಾರ

Date:

Advertisements
  • ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
  • 4 ಗುಂಪು ಮಾಡಿ ಪರಿಶಿಷ್ಟರ ಒಳ ಮೀಸಲಾತಿ ಹಂಚಿದ ಸರ್ಕಾರ

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ವಿಚಾರವಾಗಿ ಮಹತ್ವದ ನಿರ್ಧಾರಗಳನ್ನು ಸರ್ಕಾರ ತಗೆದುಕೊಂಡಿದೆ.

ಪರಿಶಿಷ್ಟರ ಮೀಸಲಾತಿ ವಿಚಾರದಲ್ಲಿ ಆರ್ಟಿಕಲ್​ 342 ಅನ್ವಯ 4 ಗುಂಪುಗಳನ್ನು ಮಾಡಿರುವ ಸರ್ಕಾರ ಇವುಗಳಿಗೆ ಒಳಮೀಸಲಾತಿ ಹಂಚಿದೆ.

ಈ ಪೈಕಿ ಗುಂಪು ಒಂದು ಆದಿಜಾಂಬವ ಸಮುದಾಯಕ್ಕೆ ಶೇ 6ರಷ್ಟು ಮೀಸಲಾತಿ, ‘ಗುಂಪು 2’ ಆದಿಕರ್ನಾಟಕ ಸಮುದಾಯಕ್ಕೆ ಶೇ 5.5ರಷ್ಟು ಮೀಸಲಾತಿ, ಗುಂಪು 3 ಬಂಜಾರ, ಬೋವಿ, ಕೊರಚರಿಗೆ ಶೇ 4.5ರಷ್ಟು ಮೀಸಲಾತಿ, ಗುಂಪು 4ರಲ್ಲಿರುವ ಮತ್ತಿತರರಿಗೆ ಶೇ.1ರಷ್ಟು ಮೀಸಲಾತಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisements

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಂಜೆ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯನ್ನು ಪ್ರಸಕ್ತ ವಿಧಾನಸಭೆ ಅವಧಿಯ ಬಹುತೇಕ ಕೊನೆಯ ಸಚಿವ ಸಂಪುಟ ಸಭೆ ಎಂದೇ ಪರಿಗಣಿಸಲಾಗಿದೆ.

WhatsApp Image 2023 03 24 at 8.10.13 PMಒಕ್ಕಲಿಗ, ಲಿಂಗಾಯತ ಸಮುದಾಯಕ್ಕೂ ಮೀಸಲಾತಿ

ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ನೀಡಲಾಗುವ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ. 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಿ, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳಲಾಗಿದೆ.

ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಮೂಲಕ ಚುನಾವಣೆ ಸಂದರ್ಭದಲ್ಲಿ ಎರಡು ಬೃಹತ್ ಸಮುದಾಯಗಳನ್ನು ಸೆಳೆಯುವ ತಂತ್ರಗಾರಿಕೆಯನ್ನು ಸರ್ಕಾರ ಮಾಡಿದೆ.

WhatsApp Image 2023 03 24 at 8.10.13 PM 1“ಹಿಂದುಳಿದ ವರ್ಗದಲ್ಲಿ ಒಂದೇ ಕೆಟಗರಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರಿಗೆ 7 ರಾಜ್ಯಗಳಲ್ಲಿ ಒಬಿಸಿ ಮೀಸಲಾತಿ ಇಲ್ಲ. ಹೀಗಾಗಿ 2ಬಿ ಅಡಿ ಮೀಸಲಾತಿ ನೀಡಿಲ್ಲ. 2C ಅಡಿ ಒಕ್ಕಲಿಗರಿಗೆ ಶೇಕಡಾ 6ರಷ್ಟು ಮೀಸಲಾತಿ ಹಾಗೂ 2D ಅಡಿ ಲಿಂಗಾಯತರಿಗೆ ಶೇಕಡಾ 7ರಷ್ಟು ಮೀಸಲಾತಿ ನೀಡಲಾಗುವುದು” ಎಂದು ಸಿಎಂ ಹೇಳಿದ್ದಾರೆ.

ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ನೀಡುವ ವಿಷಯಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಯಥಾಸ್ಥಿತಿ ಮಧ್ಯಂತರ ಆದೇಶವನ್ನು ಗುರುವಾರ ತೆರವುಗೊಳಿಸಲಾಗಿತ್ತು. ಇದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರ ನಿರಾಳವಾಗಿತ್ತು. 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ಹೈಕೋರ್ಟ್​ಗೆ ತಿಳಿಸಿದ್ದರು. ಈ ಭರವಸೆ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವುಗೊಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X