ತುಮಕೂರು | ಸಾಹಿತ್ಯ ಸಮ್ಮೇಳನಗಳು ಆಡಂಬರಕ್ಕಿಂತ ಅರ್ಥಪೂರ್ಣವಾದಾಗ ಜನರನ್ನು ತಲುಪಲು ಸಾಧ್ಯ : ಬರಗೂರು

Date:

Advertisements

ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಮಹಿಳೆ, ದಲಿತ, ರೈತ, ಕಾರ್ಮಿಕ ಚಳವಳಿಗಳ ಬಗ್ಗೆ ಚರ್ಚಿಸುವ ಬದಲು, ಸಾಹಿತ್ಯಕೇಂದ್ರಿತವಾಗಿ ದಲಿತರು, ಪ್ರಗತಿಪರರು, ರೈತರು, ಮಹಿಳೆಯರು, ಕಾರ್ಮಿಕರ ವಿಷಯಗಳನ್ನು ಚರ್ಚಿಸುವ ಮೂಲಕ ಕನ್ನಡದ ವಿವೇಕವನ್ನು ವಿಸ್ತರಿಸುವ ಕೆಲಸವಾಗಬೇಕೆಂದು ಸಾಹಿತಿ ಬರಗೂರು ರಾಮಚಂದ್ರಪ್ಪ ತಿಳಿಸಿದರು.

ತುಮಕೂರು ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮಗ್ರವಾದದು. ಕನ್ನಡ ಸಾಹಿತ್ಯದ ವಿವೇಕ ಬಹಳ ವಿಸ್ತಾರವಾದದು. ಮಾನವೀಯತೆ ಬದಲು ಮತೀಯತೆ ಆವರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಪಂಪನಿಂದ ಇಂದಿನ ದಲಿತ, ಬಂಡಾಯ ಸಾಹಿತ್ಯದವರೆಗೆ ಕನ್ನಡ ಬಹು ದೊಡ್ಡ ವಿವೇಕವನ್ನು ಸಮಾಜಕ್ಕೆ ನೀಡಿದೆ. ಅದನ್ನು ಜನಸಾಮಾನ್ಯರ ಮಧ್ಯೆ ತೆಗೆದುಕೊಂಡು ಹೋಗುವ ಕೆಲಸ ಇಂತಹ ಸಮ್ಮೇಳನಗಳ ಮೂಲಕ ಆಗಬೇಕಾಗಿದೆ ಎಂದು ತಿಳಿಸಿದರು.

1000714185

ಕನ್ನಡ ಭಾಷೆ ಧಾರ್ಮಿಕ, ರಾಜಕೀಯ, ಸಾಹಿತ್ಯಿಕ, ಸಾಮಾಜಿಕ, ಆರ್ಥಿಕ ವಿವೇಕಗಳನ್ನು ಕಲ್ಪಿಸಿರುವ ಭಾಷೆಯಾಗಿದೆ. ಕನ್ನಡ ಸಾಹಿತ್ಯದ ವಿವೇಕ ಬಹಳ ಪ್ರಾಚೀನವಾಗಿದ್ದು, ಪಂಪ-ರನ್ನರ ಕಾಲದಿಂದಲೂ ಹಲವು ವಿಷಯಗಳ ಕುರಿತು ಚರ್ಚಿಸಿಕೊಂಡು ಬರಲಾಗುತ್ತಿದೆ. ಕನ್ನಡ ಸಾಹಿತ್ಯವು ಜನಪದ, ಸಂಸ್ಕೃತಿ ಸೇರಿದಂತೆ ಸ್ಥಳೀಯ, ಪ್ರಾದೇಶೀಕ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ವಿಚಾರಗಳನ್ನು ಒಳಗೊಂಡಿದೆ ಎಂದರು.

Advertisements

ಜನಸಾಮಾನ್ಯರ ಬಗ್ಗೆ ಗೌರವ ಇದ್ದಾಗ ಮಾತ್ರ ಸಾಹಿತ್ಯ ಉತ್ಕೃಷ್ಟವಾಗಿರುತ್ತದೆ. ಬರೆಯದವರ ಬಗ್ಗೆ ಬರೆಯುವವರು ಗೌರವ ಹೊಂದಿದಾಗ ಮಾತ್ರ ಸಾಹಿತ್ಯ ಬರೆಯುವವರ ಗೌರವ ಹೆಚ್ಚಾಗುತ್ತದೆ ಎಂದು ಹೇಳಿದರು.

1000714199

ಕನ್ನಡ ಸಾಹಿತ್ಯದಲ್ಲಿ 10ನೇ ಶತಮಾನದಿಂದ 21ನೇ ಶತಮಾನದವರೆಗೆ ಜಾತಿ ನಿರಾಕರಣೆ ಮಾಡುತ್ತಲೇ ಸಾಹಿತ್ಯವನ್ನು ವಿಸ್ತರಿಸುವ ಕೆಲಸ ಮಾಡಲಾಗುತ್ತಿದ್ದರೂ ಸಹ ಜಾತೀಯತೆ ಮತ್ತಷ್ಟು ಕಠಿಣ ಸ್ವರೂಪವನ್ನು ಪಡೆದುಕೊಳ್ಳುತ್ತಿರುವ ಬೆಳವಣಿಗೆಗಳು ಆತಂಕಕಾರಿಯಾಗಿವೆ. ಇಂದಿನ ರಾಜಕೀಯ ಪರಿಸ್ಥಿತಿ ಕುಮಾರವ್ಯಾಸರ “ಅರಸು ಮೊರೆವ ಹುಲಿ” ಎಂಬ ಹೇಳಿಕೆಯಂತೆ ಬಡವರ ಭಿನ್ನಪ್ಪವ ಕೇಳುವವರೇ ಇಲ್ಲದಂತಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X