ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಮತ್ತೊಮ್ಮೆ ಪ್ರಧಾನಿ ವಿರುದ್ಧ ಹರಿಹಾಯ್ದಿದ್ದಾರೆ.
2014 ರಲ್ಲಿ ನರೇಂದ್ರ ಮೋದಿ ಅವರ ಪರ ಚುನಾವಣಾ ಪ್ರಚಾರ ಮಾಡಿದಕ್ಕಾಗಿ ನಾನು ಈಗ ಪಶ್ಚಾತ್ತಾಪ ಪಡುತ್ತೇನೆ ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಮೋದಿಯನ್ನು ಸುಳ್ಳುಗಾರ ಎಂದು ಕರೆದ ಅವರು, ಅಕ್ಬರ್‌ನಿಗೆ ಸರ್ವಸ್ವವನ್ನೂ ಸಮರ್ಪಿಸಿದ ಬೀರಬಲ್ ನಂತೆ ಆಗಲು ನಾನು ತಯಾರಿಲ್ಲಎಂದು ಹೇಳಿದ್ದಾರೆ.
2014 ರಲ್ಲಿ ಮೋದಿ ಪರ ಪ್ರಚಾರ ಮಾಡಿದಕ್ಕೆ ನಾನು ಪಶ್ಚಾತ್ತಾಪ ಪಡುತ್ತೇನೆ. ಸುಳ್ಳುಗಾರ ಆಗಿ ಅವರು ಬದಲಾಗಿದ್ದಾರೆ. ಉದಾಹರಣೆಗೆ, ತಾನು ಪ್ರಧಾನಿಯಾದ 15 ದಿನದಲ್ಲಿ ವಿದೇಶದಲ್ಲಿರುವ ಎಲ್ಲ ಕಪ್ಪು ಹಣವನ್ನು ತರುತ್ತೇನೆ ಎಂದು ಅವರು ಹೇಳಿದ್ದರು ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಚಂದ್ರಶೇಖರ ಸ್ವಾಮೀಜಿ ಬಾಯಿ ತಪ್ಪಲಿಲ್ಲ, ಮನಸಿನ ಮಾತೇ ಹೊರಬಿದ್ದಿದೆ
ವಿರಾಟ್ ಹಿಂದೂಸ್ತಾನ್ಸಂಗಮ್ (ವಿಎಚ್ಎಸ್) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಕಾಂಗ್ರೆಸ್ ರಾಹುಲ್ ಗಾಂಧಿಯವರ ಪೌರತ್ವ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸ್ವಪಕ್ಷೀಯರ ವಿರುದ್ಧವೇ ನಿರಂತರ ವಾಗ್ದಾಳಿ ನಡೆಸುತ್ತಿದ್ದು, ಮುಖ್ಯವಾಗಿ ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿಕೊಂಡು ಟ್ವೀಟ್ ಮಾಡುತ್ತಿದ್ದಾರೆ. ಕೆಲ ದಿನಗಳ ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದರು.
