ಅಪ್ರಾಪ್ತ ಮೊಮ್ಮಗಳ ಮೇಲೆ ಹಲವು ವರ್ಷಗಳ ಕಾಲ ನಿರಂತರವಾಗಿ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೇರಳದ ನ್ಯಾಯಾಲಯವೊಂದು ವ್ಯಕ್ತಿಯೊಬ್ಬನಿಗೆ 141 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಐಪಿಸಿ ಮತ್ತು ಬಾಲಾಪರಾಧ ನ್ಯಾಯ ಕಾಯ್ದೆಯ ವಿವಿಧ ನಿಬಂಧನಗೆಳ ಅಡಿಯಲ್ಲಿ ಮಂಜೇರಿ ಫಾಸ್ಟ್ ಟ್ರಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಶ್ರಫ್ ಎ ಎಂ ಒಟ್ಟು 141 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಿದ್ದಾರೆ.
ಆದರೆ ವ್ಯಕ್ತಿಗೆ ಗರಿಷ್ಠ ಶಿಕ್ಷೆ 40 ವರ್ಷ ಆಗಿರುವುದರಿಂದ ವ್ಯಕ್ತಿ ಸುಮಾರು 40 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ಅನುಭವಿಸಲಿದ್ದಾನೆ. ಅದಾದ ಬಳಿಕ ನವೆಂಬರ್ 29ರ ನ್ಯಾಯಾಲಯದ ಆದೇಶದಂತೆ ವಿವಿಧ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸಬೇಕಾಗುತ್ತದೆ.
ಇದನ್ನು ಓದಿದ್ದೀರಾ? ಕೇರಳ | ಖ್ಯಾತ ಸಿನಿಮಾ ಸಂಕಲನಕಾರ ನಿಶಾದ್ ಯೂಸುಫ್ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ
ಹಾಗೆಯೇ ನ್ಯಾಯಾಲಯವು ಅಪರಾಧಿಗೆ 7.85 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ. ಹಾಗೆಯೇ ಸಂತ್ರಸ್ತೆಗೆ ಪರಿಹಾರ ನೀಡುವಂತೆಯೂ ಆದೇಶಿಸಿದೆ.
ಅಪರಾಧಿ ಹಾಗೂ ಸಂತ್ರಸ್ತೆ ಇಬ್ಬರೂ ಕೂಡಾ ತಮಿಳುನಾಡು ಮೂಲದವರಾಗಿದ್ದಾರೆ. 2017ರಿಂದ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ. ಬಾಲಕಿಯು ತನ್ನ ಸ್ನೇಹಿತೆ ದೈರ್ಯ ತುಂಬಿದ ಬಳಿಕ ತನ್ನ ಮೇಲಾಗುತ್ತಿರುವ ದೌರ್ಜನ್ಯವನ್ನು ತಾಯಿಗೆ ತಿಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
