ವಿಧಾನಸಭೆಯ ಘನತೆ ನಿಮ್ಮಿಂದ ಹೆಚ್ಚಾಗಲಿ; ಸ್ಪೀಕರ್‌ ಯು ಟಿ ಖಾದರ್‌ಗೆ ಸಿದ್ದರಾಮಯ್ಯ, ಬೊಮ್ಮಾಯಿ ಸಲಹೆ

Date:

Advertisements
  • ನೂತನ ಸಭಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ ಎಲ್ಲ ಪಕ್ಷದ ಶಾಸಕರು
  • ನಿಮ್ಮ ತಕ್ಕಡಿ ಸಮವಾಗಿ ಇರಲಿ: ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ

16ನೇ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಯು ಟಿ ಖಾದರ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ನೂತನ ಶಾಸಕರು ಅಭಿನಂದಿಸಿದರು.

ಇದಕ್ಕೂ ಮೊದಲು ಯು ಟಿ ಖಾದರ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಬಸವರಾಜ ಬೊಮ್ಮಾಯಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಭಾಧ್ಯಕ್ಷ ಪೀಠಕ್ಕೆ ಕರೆದೊಯ್ದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, “ನೂತನ ಸ್ಪೀಕರ್ ಆಗಿ ಆಯ್ಕೆಯಾದ ಯು ಟಿ ಖಾದರ್‌ ಅವರಿಗೆ ಅಭಿನಂದನೆಗಳು. ಈ ಹಿಂದೆ ಅತಿ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಸದನವೀರ ಪ್ರಶಸ್ತಿಯೂ ಖಾದರ್‌ ಅವರಿಗೆ ಸಿಕ್ಕಿತ್ತು. ವಿಪಕ್ಷ ಉಪನಾಯಕರಾಗಿಯೂ ಖಾದರ್​ ಉತ್ತಮ ಕೆಲಸ ಮಾಡಿದ್ದಾರೆ” ಎಂದರು.

Advertisements

“ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ನಾಡಿನ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಹಿತರಕ್ಷಣೆ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಸ್ಥಾನ ಅತ್ಯುನ್ನತವಾದುದು. ಖಾದರ್‌ ಅವರು ಜಾತ್ಯತೀತ ಮನೋಭಾವ ಉಳ್ಳವರು. ಪಕ್ಷಾತೀತವಾಗಿ ಕೆಲಸ ಮಾಡುವ ನಿರೀಕ್ಷೆಯನ್ನು ಎಲ್ಲ ಸದಸ್ಯರು ಬಯಸುತ್ತಾರೆ. ನಿಮ್ಮಿಂದ ವಿಧಾನಸಭೆಯ ಘನತೆ ಹೆಚ್ಚಾಗಲಿ” ಎಂದು ಸಿದ್ದರಾಮಯ್ಯ ಆಶಿಸಿದರು.

ನಿಮ್ಮ ತಕ್ಕಡಿ ಸಮವಾಗಿರಲಿ: ಬಸವರಾಜ ಬೊಮ್ಮಾಯಿ‌

ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಗೆ‌ ಶುಭಾಶಯ ಕೋರಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, “ನಿಮ್ಮ ತಕ್ಕಡಿ ಸಮವಾಗಿ ಇರಲಿ. ಕರ್ನಾಟಕದ ವಿಧಾನ ಮಂಡಲ ತನ್ನದೇ ಆದ ಘನತೆ ಹೊಂದಿದೆ. ಇಂತಹ ಮಹತ್ವದ ಸದನದ ಸಭಾಧ್ಯಕ್ಷರಾಗಿ ನೀವು ಆಯ್ಕೆಯಾಗಿರುವುದಕ್ಕೆ ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ. ನಿಮಗೆ ಇಪ್ಪತ್ತು ವರ್ಷದ ಅನುಭವ ಇದೆ. ನೀವು ಶಾಸಕರಾಗಿ, ಸಚಿವರಾಗಿ ಕೆಲಸ ಮಾಡುವಾಗ ಯಾವತ್ತೂ ಸಂಯಮ ಕಳೆದುಕೊಳ್ಳದೆ ಕೆಲಸ ಮಾಡಿದ್ದೀರಿ” ಎಂದರು.

“ವಿರೋಧ ಪಕ್ಷದ ಉಪ ನಾಯಕರಾಗಿಯೂ ಸಮರ್ಥವಾಗಿ ಕೆಲಸ ಮಾಡಿದ್ದೀರಿ‌. ಈ ಹಿಂದೆ ಈ ಹುದ್ದೆ ಅಲಂಕರಿಸಿದವರು ಈ ಹುದ್ದೆಯ ಗೌರವ ಹೆಚ್ಚಿಸಿದ್ದಾರೆ. ನೀವು ಕೊಡುವ ತೀರ್ಪು ಇಡೀ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು, ಫೀಲ್ಡ್‌ಗೆ ಹೋಗಿ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

“ಸಂವಿಧಾನದಲ್ಲಿ ವಿಶೇಷ ಸ್ಥಾನ ಸಭಾಪತಿಗಳಿಗೆ ಇದೆ. ಸರ್ಕಾರದ ಅಳಿವು ಉಳಿವಿನ ತೀರ್ಮಾನ ಆಗಿದೆ. ಕೆಲವು ತೀರ್ಪುಗಳು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದೂ ಇದೆ. ತಾವು ನೀಡುವ ತೀರ್ಪು ಲ್ಯಾಂಡ್ ಮಾರ್ಕ್ ಆಗುತ್ತದೆ. ನೀವು ನಿಷ್ಪಕ್ಷಪಾತವಾಗಿ ಕೆಲಸ ಮಾಡಿ. ಪ್ರತಿಪಕ್ಷದಲ್ಲಿ ನಿಮ್ಮ ಸ್ನೇಹಿತರು ಹೆಚ್ಚಿದ್ದಾರೆ. ಆಡಳಿತ ಪಕ್ಷದಲ್ಲಿ ನಿಮ್ಮ ನಿಕಟ ಪೂರ್ವ ಪಕ್ಷದ ಆತ್ಮೀಯರು ಇದ್ದಾರೆ. ಇಬ್ಬರನ್ನೂ ಸಮನಾವಾಗಿ ನೋಡಿ” ಎಂದು ಸಲಹೆ ನೀಡಿದರು.

“ಪ್ರತಿಪಕ್ಷಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಬಾರಿ ಹೊಸ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಬಂದಿದ್ದಾರೆ. ಅವರಿಗೆ ಮಾತನಾಡಲು ಹೆಚ್ಚಿನ ಅವಕಾಶ ನೀಡಿ ಹೊಸ ವಿಚಾರಗಳು ಹೊರಬರಲಿ. ನೀವು ಪ್ರಗತಿಪರರಿದ್ದೀರಿ, ನಿಮ್ಮ ಕ್ಷೇತ್ರ ಹಾಗೂ ಜಿಲ್ಲೆಯಲ್ಲಿ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ಕೆಲಸ ಮಾಡಿದ್ದೀರಿ. ರಾಜ್ಯದ ವಿಚಾರದಲ್ಲಿಯೂ ಎಲ್ಲ ಸಮುದಾಯಗಳನ್ನೂ ಒಗ್ಗೂಡಿಸಿಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ. ಆ ಕೆಲಸವನ್ನು ನೀವು ಮಾಡುತ್ತೀರಿ ಎಂಬ ನಂಬಿಕೆ ಇದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X