ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ.
ಶನಿವಾರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಉಮೇಶ್ (45) ಮೃತರು. ಕೃಷಿಕನ ಮೇಲೆ ಕಾಡಾನೆ ದಾಳಿ ನಡೆಸಿ ವಿಕೃತವಾಗಿ ತುಳಿದಿದೆ. ಆನೆ ತುಳಿತದಿಂದ ಕೃಷಿಕ ಉಮೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದಂತೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು . ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದರೂ ಸ್ಥಳೀಯ ಶಾಸಕರು, ಅಧಿಕಾರಿಗಳಿಗೆ ಕ್ಯಾರೇ ಎನ್ನುತ್ತಿಲ್ಲ ಎಂದು ಸ್ಥಳೀಯರು ಕಿಡಿಕಾರಿದರು.
ಇದನ್ನೂ ಓದಿದ್ದೀರಾ?http://ಚಿಕ್ಕಮಗಳೂರು l ದಲಿತರ ಗುಡಿಸಲನ್ನು ನೆಲಸಮ ಮಾಡಿದ ತಾಲೂಕು ಅಧಿಕಾರಿಗಳು
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ವರ್ಷದಲ್ಲಿ ಕಾಡಾನೆ ದಾಳಿಗೆ ಹತ್ತಾರು ಜೀವಗಳು ಬಲಿ ಪಡೆದಿದ್ದರೆ, ಮತ್ತೊಂದೆಡೆ ಚಿಕ್ಕಮಗಳೂರು ತಾಲೂಕಿನಲ್ಲಿ ಬೀಟಮ್ಮ ಗ್ಯಾಂಗ್‌ನ ಉಪಟಳ ಮುಂದುವರೆದಿದೆ. ಆನೆಯ ದಾಳಿಯಿಂದ ಮಲೆನಾಡಿನ ಜನರಿಗೆ ಮತ್ತಷ್ಟು ಅಂತಕವಾಗಿದೆ ಎಂದಿದ್ದಾರೆ.
